ಡೊನೇಷನ್ ಹಾವಳಿ ತಡೆಗಟ್ಟಲು ಎಸ್ ಎಫ್ ಐ ಮನವಿ

?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಬೀದರ:ಮೇ.18:ಭಾರತ ವಿದ್ಯಾರ್ಥಿ ಫೆಡರೇಶನ್ ಎಸ್ ಎಫ್ ಐ ಜಿಲ್ಲಾ ಸಮಿತಿ ಮನವಿ ಮೂಲಕ ಒತ್ತಾಯಿಸುವುದೇನೆಂದರೆ ಜಿಲ್ಲೆಯಾದಂತ ಖಾಸಗಿ ಶಾಲೆಗಳು 2024 25 ನೇ ಸಾಲಿನ ಪ್ರವೇಶ ಶುಲ್ಕ. ಬಟ್ಟೆ. ಶೂ ಸಾಕ್ಸ್. ಟೈ ಬೆಲ್ಟ್ ಸ್ಮಾರ್ಟ್ ಕ್ಲಾಸ್ ಶುಲ್ಕ. ಟ್ಯೂಷನ್ ಶುಲ್ಕವನ್ನು ಹೆಚ್ಚಿಗೆ ಮಾಡಿ ಡೊನೇಷನ್ ವಸೂಲಿ ಮಾಡಲು ಮುಂದಾಗಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ ಬೀದರ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸುತ್ತದೆ.
ಜಿಲ್ಲೆಯಲ್ಲಿ ಬಹುತೇಕ ಎಲ್ಲಾ ಖಾಸಗಿ ಶಾಲೆಗಳು ಈಗಾಗಲೇ ಬೇಬಿ ಕ್ಲಾಸಿನಿಂದ ಎಲ್ಲಾ ತರಗತಿಯ ಪ್ರವೇಶತಿಯನ್ನು ಪ್ರಾರಂಭಿಸಿ ವಿದ್ಯಾರ್ಥಿಗಳ ಪಾಲಕರಿಂದ ಮನಬಂದಂತೆ ಡೊನೇಷನ್ ವಸೂಲಿಗೆ ಮುಂದಾಗಿವೆ. ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾದರು ಜಿಲ್ಲಾ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೌನವಾಗಿರುವುದಕೆ?
ಸರ್ಕಾರ ಇನ್ನು ಈ ವರ್ಷದ ಶೈಕ್ಷಣಿಕ ಪ್ರವೇಶಾತಿಯನ್ನು ಪ್ರಾರಂಭ ಮಾಡದಿದ್ದರೂ ಖಾಸಗಿ ಶಾಲೆಗಳು ತುದಿಕಾಲಲ್ಲಿ ನಿಂತು ಪ್ರವೇಶಾತಿ ಶುಲ್ಕ ಹಾಗೂ ಬಟ್ಟೆ ಶೂ,ಸಾಕ್ಸ ನೋಟ್ ಬುಕ್ಸ್ ಗಳನ್ನು ಶಾಲೆಗಳಲ್ಲಿ ಮಾರಾಟ ಮಾಡುತ್ತಿರುವುದು ಕಾನೂನುಬಾಹಿರ. ಇಂತಹ ಶಾಲೆಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು 2024 25 ನೇ ಶೈಕ್ಷಣಿಕ ವರ್ಷದ ವಾರ್ಷಿಕ ಶುಲ್ಕದಲ್ಲಿ ಕೇವಲ ಬೋಧನ ಶುಲ್ಕ ಮಾತ್ರ ವಸೂಲಿ ಮಾಡಬೇಕು. ಯಾವುದೇ ಕಾರಣಕ್ಕೂ ಆನ್ ಲೈನ್ ಶಿಕ್ಷಣ ನೀಡುವುದು ಸರಿಯಾದ ಕ್ರಮವಲ್ಲ. 1983ರ ಶಿಕ್ಷಣ ಕಾಯಿದೆ ಎಲ್ಲಾ ಖಾಸಗಿ ಶಾಲೆಗಳು ಪ್ರವೇಶಾತಿಗೆ ಖಾಲಿ ಇರುವ ಸೀಟುಗಳನ್ನು ನೋಟಿಸ್ ಬೋರ್ಡ್ ಗೆ ಹಾಕಬೇಕು. ಮತ್ತು ರೋಸ್ಟರ್ ಪ್ರಕಾರ ಸೀಟು ಹಾಗೂ ಶುಲ್ಕವನ್ನು ನಿಗದಿಗೊಳಿಸಿ ಶಾಲೆಯ ಮುಂಭಾಗದಲ್ಲಿ ಪ್ಲೆಕ್ಸ್ಹಾಹಾಕಬೇಕು ಎಂದು ನಿಯಮ ಇದ್ದರು ಜಿಲ್ಲೆಯ ಯಾವ ಶಾಲೆಗಳು ಸಹ ಹಾಕಿರುವುದಿಲ್ಲ. ಅನೇಕ ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರು. ಕ್ರಮ ಜರುಗಿಸಲು ಮುಂದಾಗಿಲ್ಲ ಸರ್ಕಾರದ ಅಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಮಾಡಲು ಜಿಲ್ಲೆಯ ಬಿಇಒ ಗಲಕು ಪ್ರಕಟಿಸಿಲ್ಲ ಯಾಕೆ? ಖಾಸಗಿ ಶಾಲೆಗಳ ಜೊತೆ ಹೊಂದಾಣಿಕೆ ಆಗಿದ್ದಾರೆ ಎಂಬ ಪ್ರಶ್ನೆ ಬರುತ್ತದೆ.
ಆದ್ದರಿಂದ ಕೂಡಲೇ ಶಾಲೆಗಳ ಮೇಲೆ ಕಾನೂನು ಕ್ರಮ ಜರುಗಿಸಿ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ರೇಗುಲೇಟಿಂಗ್ ಪ್ರಾಧಿಕಾರ ರಚಿಸಿ ಶಾಲೆಗಳ ಮೇಲೆ ಕ್ರಮ ಜರುಗಿಸಬೇಕು ಹಾಗೂ ಸಂಘಟನೆಯ ಮುಖಂಡರನ್ನು ಒಳಗೊಂಡಂತೆ ಜಂಟಿ ಸಭೆ ಸೇರಬೇಕೆಂದು ಮನವಿ ಪತ್ರದ ಮೂಲಕ ಒತ್ತಾಯಿಸುತ್ತೇವೆ.
ಬೇಡಿಕೆಗಳು : ಡೊನೇಶನ್ ಹಾವಳಿ ನಿಯಂತ್ರಣ ಮಾಡಬೇಕು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ರೆಗುಲೇಟಿಂಗ್ ಪ್ರಾಧಿಕಾರ ರಚಿಸಿ, ಸರ್ಕಾರದ ನಿಯಮ ಗಾಳಿಗೆ ತೂರಿದ ಶಾಲೆಗಳ ಮಾನ್ಯ ತೆ ರದ್ದು ಮಾಡಿ, ಅನಧಿಕೃತ ವಾಗಿ ಶಾಲೆಗಳ ಮಾನ್ಯತೆ ಇಲ್ಲದೆ ಐಸಿಐಸಿ/ ಸಿಬಿಎಸ್ಸಿ. ನಡೆಸುವ ಶಾಲೆಗಳ ಮಾನ್ಯತೆ ರದ್ದುಗೊಳಿಸಿ, ಅಧಿಕೃತ ಶಾಲೆಗಳ ಕನ್ನಡ ಮಾಧ್ಯಮ/ ಇಂಗ್ಲಿಷ್ ಮಾಧ್ಯಮ ಶಾಲೆಗಳ ಪಟ್ಟಿ ಬಿಡುಗಡೆ ಮಾಡಬೇಕು ಎಂದು ಇಂದು ಭಾರತ ವಿದ್ಯಾರ್ಥಿ ಫೆಡರೇಶನ್ ಇಂದು ಜಿಲ್ಲಾಧಿಕಾರಿಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ಎ ಫ್.ಐ ಜಿಲ್ಲಾಧ್ಯಕ್ಷರಾದ ಅರುಣ ಕೊಡಗೆ, ಅಮರ ಗಾದಗಿ, ರೋಷನ್ ಮಲ್ಕಾಪೂರೆ ಇದ್ದರು.