ಡ್ರಗ್ಸ್ ಜಾಲ‌ ಬಿನೀಶ್ ಕೊಡಿಯೇರಿ ನ.10ರವರೆಗೆ ಎನ್​ಸಿಬಿ ಕಸ್ಟಡಿಗೆ

ಬೆಂಗಳೂರು,ನ.17-ಡ್ರಗ್ಸ್ ಸರಬರಾಜು ಪ್ರಕರಣದಲ್ಲಿ ಆರೋಪಿಗಳೊಂದಿಗೆ ನಂಟು ಹೊಂದಿದ ಆರೋಪದಡಿ‌ ಮಾದಕ ವಸ್ತು ನಿಯಂತ್ರಣ ದಳವು (ಎನ್​ಸಿಬಿ) ನ್ಯಾಯಾಂಗ ಬಂಧನದಲ್ಲಿರುವ ಕೇರಳ ಮಾಜಿ ಗೃಹ ಸಚಿವರ ಪುತ್ರ ಬಿನೀಶ್ ಕೊಡಿಯೇರಿಯನ್ನು ನ.20 ರವರೆಗೆ ವಶಕ್ಕೆ ಪಡೆದುಕೊಂಡಿದೆ.
ಡ್ರಗ್ಸ್ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದಡಿ ಜಾರಿ‌ ನಿರ್ದೇಶಾಲಯ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ‌‌ ಒಪ್ಪಿಸಿದ್ದರು.
ಎನ್​ಸಿಬಿ ಅಧಿಕಾರಿಗಳು ಬಂಧಿಸಿದ್ದ ಆರೋಪಿ ಮೊಹಮ್ಮದ್ ಅನೂಪ್​ನೊಂದಿಗೆ ನಿಕಟ ಸಂಪರ್ಕ ಹೊಂದಿರುವುದು ಗೊತ್ತಾಗಿತ್ತು. ಈತನ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಬೇನಾಮಿ‌ ಆಸ್ತಿ ಗಳಿಕೆ ಹೊಂದಿರುವುದು ತಿಳಿದು ಬಂದಿತ್ತು. ಇದೇ ಆರೋಪದಡಿ ಹೆಚ್ಚಿನ ವಿಚಾರಣೆ ನಡೆಸಲು ಎನ್​ಸಿಬಿ ಅಧಿಕಾರಿಗಳು ನ್ಯಾಯಾಲಯದಿಂದ ನ.20 ರವರೆಗೆ ವಶಕ್ಕೆ ಪಡೆದುಕೊಂಡಿದ್ದಾರೆ.
ಸ್ಯಾಂಡಲ್​ವುಡ್ ನಟ ನಟಿಯರಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಆರೋಪಿಗಳಿಗೆ ಡ್ರಗ್ಸ್ ವ್ಯವಹಾರದಲ್ಲಿ ಭಾಗಿಯಾಗಿದ್ದ. ಡ್ರಗ್ಸ್ ಕೇಸ್​ನಲ್ಲಿ ಈಗಾಗಲೇ ಅನುಪ್ ಮೊಹಮ್ಮದ್, ಅನಿಕಾ ಸೇರಿದಂತೆ ಒಟ್ಟು‌ ಮೂವರು ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.