ಡ್ರಗ್ಸ್ ಜಾಲ ಆರೋಪಿಗಳ ಬಂಧನಕ್ಕೆ ಲುಕ್‌ಔಟ್ ನೋಟಿಸ್

ಬೆಂಗಳೂರು,ನ.೯-ಸ್ಯಾಂಡಲ್?ವುಡ್ ಡ್ರಗ್ಸ್ ಜಾಲ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಸಿಸಿಬಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ.
ಡ್ರಗ್ ಜಾಲದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿರುವ ಮೊದಲ ಆರೋಪಿ ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ ೫ನೇ ಆರೋಪಿ ಆದಿತ್ಯ ಆಳ್ವಾ ೧೦ನೇ ಆರೋಪಿ ಅಭೀಷೇಕ್ ಅಲ್ಲದೇ ಶೇಖ್ ಫಾಜ್?, ಮನ್ಸೂರ್ ಅಲಿಯಾಸ್ ಮ್ಯಾಸ್ಸಿಗೆ ಸಿಸಿಬಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿಗೊಳಿಸಿ ನಿಗಾ ವಹಿಸಿದ್ದಾರೆ.
ಲುಕ್ ಔಟ್ ನೋಟಿಸ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ವಿಮಾನನಿಲ್ದಾಣದ ಮೂಲಕ ವಿದೇಶಕ್ಕೆ ಹಾರಾಟ ಮಾಡಲು ಸಾಧ್ಯವಿಲ್ಲ.
ತಲೆಮರೆಸಿಕೊಂಡ ಆರೋಪಿಗಳಿಗಾಗಿ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ.
ಆರೋಪಪಟ್ಟಿ
ಡ್ರಗ್ಸ್ ಜಾಲ ಪ್ರಕರಣದ ತನಿಖೆಯನ್ನು ತೀವ್ರ ಗೊಳಿಸಿರುವ ಸಿಸಿಬಿ ಅಧಿಕಾರಿಗಳು ೯೦ ದಿನದ ತನಿಖೆಯ ಪ್ರಾಥಮಿಕ ಹಂತದ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲು ಸಿದ್ದತೆ ನಡೆಸಿದ್ದಾರೆ.