ಡ್ರಗ್ಸ್ ಜಾಲ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಸೆರೆ

ಬೆಂಗಳೂರು,ನ.9-ಡ್ರಗ್ಸ್ ಜಾಲ ಪ್ರಕರಣದ ಸಂಬಂಧ ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಡ್ರಗ್ಸ್ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ಮಾಜಿ ಸಚಿವ
ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿಯನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ.
ನವೆಂಬರ್ 5ರಂದು ಡ್ರಗ್ಸ್ ಪೆಡ್ಲರ್ ಸುಜಯ್ ಎಂಬಾತನನ್ನು ಸಿಸಿಬಿ ಬಂಧಿಸಿತ್ತು. ಬಂಧಿತ ಸುಜಯ್ ಬಿಟ್ ಕಾಯಿನ್ಸ್ ಮುಖಾಂತರ ಡ್ರಗ್ಸ್ ಖರೀದಿಸುತ್ತಿದ್ದನು. ಬಂಧಿತನಿಂದ ಪೊಲೀಸರು 500 ಗ್ರಾಂ ಹೈಡ್ರೊ ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಮತ್ತು ಸುನಿಶ್ ತಲೆ ಮರೆಸಿಕೊಂಡಿದ್ದರು. ಈ ಇಬ್ಬರಿಗೆ ದರ್ಶನ್ ಗೋವಾದಲ್ಲಿ ಆಶ್ರಯ ನೀಡಿದ ಆರೋಪಗಳು ಕೇಳಿ ಬಂದಿವೆ. ದರ್ಶನ್ ಲಮಾಣಿ ಸಹ ಆರೋಪಿಗಳಿಬ್ಬರ ಜೊತೆ ನಿಕಟ ಸಂಪರ್ಕ ಮತ್ತು ಅವರ ಜೊತೆಯಲ್ಲಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮೂವರನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.