ಡ್ರಗ್ಸ್ ಪಿಡುಗು ಎಲ್ಲ ರಂಗದಲ್ಲೂ ಇದೆ: ಅನಿರುದ್ಧ

ಮೈಸೂರು, ಸೆ.15:- ಸ್ಯಾಂಡಲ್ ವುಡ್ ನಟ ನಟಿಯರ ಮೇಲೆ ಡ್ರಗ್ಸ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ನಟ ಅನಿರುದ್ಧ ಅವರು, ಡ್ರಗ್ಸ್ ಎನ್ನುವ ಪಿಡುಗು ಪ್ರಪಂಚದಾದ್ಯಂತ ಇದೆ. ಇದು ಕೇವಲ ಸ್ಯಾಂಡಲ್ ವುಡ್ ನಲ್ಲಿ ಮಾತ್ರ ಅಲ್ಲ. ಎಲ್ಲ ರಂಗದಲ್ಲೂ ಇದೆ ಎಂದರು.
ವಿಷ್ಣು ಸ್ಮಾರಕ ಶಿಲಾನ್ಯಾಸಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆನ್ ಲೈನ್ ಮೂಲಕ ಮಂಗಳವಾರ ಚಾಲನೆ ನೀಡಿದರು. ಡಾ. ವಿಷ್ಣುವರ್ಧನ್ ಸ್ಮಾರಕ ಶಿಲಾನ್ಯಾಸಕ್ಕೂ ಮುನ್ನ ಪೂಜಾ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಕಾರ್ಯಕ್ರಮದಲ್ಲಿ ನಟ ಅನಿರುದ್ಧ ಪಾಲ್ಗೊಂಡಿದ್ದರು.
ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿಯನ್ನ ಪೆÇಲೀಸರು ಬಂಧಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ನಟ ಅನಿರುದ್ಧ, ಕನ್ನಡ ಚಿತ್ರರಂಗದಲ್ಲಿ ಈ ರೀತಿ ನಡೆಯುತ್ತಿರೋದು ನೋವಿನ ಸಂಗತಿ. ನಾವು ಹಿರಿಯರನ್ನ ಸ್ಪೂರ್ತಿಯಾಗಿಟ್ಟುಕೊಂಡು ಬೆಳೆಯಬೇಕು. ನಮ್ಮನ್ನ ನೋಡಿ ಸಮಾಜ ಮತ್ತು ಮಕ್ಕಳು ಕಲಿಯುತ್ತಾರೆ. ಮುಂದಿನ ಪೀಳಿಗೆಗೆ ನಾವು ಒಳ್ಳೆಯದನ್ನ ಬಿಟ್ಟು ಹೋಗಬೇಕು. ಹಿರಿಯರು ಹಾಕಿದ ಬುನಾದಿಯನ್ನು ನಾವು ಕೆಡಿಸಬಾರದು. ಹಾಗಾಗಿ ಆ ಹಾದಿಯಲ್ಲಿ ನಾವು ಸಾಗಬೇಕಿದೆ ಎಂದು ಕಿವಿಮಾತು ಹೇಳಿದರು.
ಸ್ಯಾಂಡಲ್ ವುಡ್ ನ ಜವಾಬ್ದಾರಿ ಕೇವಲ ಒಬ್ಬರದ್ದಲ್ಲ’ ಎಲ್ಲರದ್ದು. ಎಲ್ಲರೂ ಕೂಡ ಇದೀಗಾ ಸ್ಯಾಂಡಲ್ ವುಡ್ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ನಟ ಅನಿರುದ್ಧ ಹೇಳಿದರು.