ಡ್ರಗ್ಸ್ ಪ್ರಕರಣ, ನಟ ಒಬೆರಾಯ್ ಪತ್ನಿಗೆ ಮತ್ತೆ ಸಿಸಿಬಿ ನೋಟಿಸ್


ಬೆಂಗಳೂರು, ಅ 17 -ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು ವಿಚಾರಣೆಗೆ ಹಾಜರಾಗುವಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿಗೆ ಶನಿವಾರ ಮತ್ತೆ ಸಿಸಿಬಿ ಮತ್ತೆ ನೋಟಿಸ್ ಜಾರಿ ಮಾಡಿದೆ.

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಬಾಲಿವುಡ್ ನಟ ವಿವೇಕ್ ಒಬೇರಾಯ್ ಪತ್ನಿ ಪ್ರಿಯಾಂಕಾ ಆಳ್ವಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು. ಆದರೆ ವಿಚಾರಣೆಗೆ ಪ್ರಿಯಾಂಕಾ ಹಾಜರಾಗದ ಕಾರಣ ಮತ್ತೆ ನೋಟೀಸ್ ಜಾರಿ ಮಾಡಿರುವುದಾಗಿ ಸಿಸಿಬಿ ಮೂಲಗಳು ತಿಳಿಸಿವೆ. .

ಈ ಕಾರಣದಿಂದಾಗಿ ಸಿಸಿಬಿ ಪೊಲೀಸರು ಮತ್ತೆ ಇಂದು ನೋಟಿಸ್ ಜಾರಿ ಮಾಡಿದ್ದಾರೆ. ವಾಟ್ಸ್ ಆಪ್ ಮೂಲಕ ಪ್ರಿಯಾಂಕಾ ಆಳ್ವಾ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ ಎನ್ನಲಾಗಿದೆ.