ತಂತ್ರಜ್ಞಾನ ಬಳಸಿಕೊಂಡು ಹೆಚ್ಚು ಮತದಾನ ಮಾಡಿಸಬೇಕು

ಮೈಸೂರು: ಮಾ.11:- ಚುನಾವಣಾ ಸಮಯದಲ್ಲಿ ವಿವಿಧ ರೀತಿಯ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಪ್ರತಿಯೊಬ್ಬರಲ್ಲೂ ಅರಿವು ಮೂಡಿಸಿ ಮತದಾನ ಮಾಡಿಸುವುದು ನಮ್ಮ ಆದ್ಯ ಕರ್ತವ್ಯವಾಗಿರುತ್ತದೆ. ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ ಎಂ ಗಾಯತ್ರಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಡಿ ದೇವರಾಜ ಅರಸ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮತದಾರರ ಸಾಕ್ಷರತಾ ಸಂಘಗಳ ತಾಲ್ಲೂಕು ಮಟ್ಟದ ತರಬೇತುದಾರರ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ಮತದಾರರನ್ನು ಮತದಾನದಲ್ಲಿ ಭಾಗಿಯಾಗುವಂತೆ ಮಾಡಬೇಕು. ತಾಲೂಕು ಮಟ್ಟದಲ್ಲಿ ಪ್ರತಿಯೊಬ್ಬ ಶಿಕ್ಷಕರ ಪಾತ್ರವು ಪ್ರಮುಖವಾಗಿದೆ. ಶಾಲಾ ಮಟ್ಟದಲ್ಲಿ ಚುನಾವಣೆಯ ಬಗ್ಗೆ ಅರಿವನ್ನು ಮೂಡಿಸಬೇಕು. ಯಾರೊಬ್ಬರು ಮತದಾನವನ್ನು ಮಾಡದೇ ಉದಾಸೀನತೆಯಿಂದ ನಡೆದುಕೊಳ್ಳದ ರೀತಿ ಅರಿವು ಮೂಡಿಸುವುದು ನಮ್ಮ ಕರ್ತವ್ಯವಾಗಿರುತ್ತದೆ ಎಂದರು.
ಈ ವರ್ಷ ಚುನಾವಣಾ ಹಬ್ಬವನ್ನು ಆಚರಿಸುತ್ತಿದ್ದೇವೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆ ಮಹತ್ವವಾದದ್ದು. ಚುನಾವಣೆ ಎಂಬುದು ಹೊಸದಲ್ಲ. ಆದರೆ ಚುನಾವಣೆ ಸಂಬಂಧಿತ ಅನುಭವಗಳು ಹೊಸದು. ಚುನಾವಣೆ ಕುರಿತ ತರಬೇತಿ ಎಂಬುದು ಅತ್ಯವಶ್ಯಕ. ತರಬೇತಿಯಲ್ಲಿ ತಮ್ಮ ಚುನಾವಣಾ ಅನುಭವ ಹಂಚಿಕೊಔಡು ಗೊಂದಲಗಳನ್ನು ನಿವಾರಿಸಿಕೊಳ್ಳಬಹುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಪಾತ್ರ ಪ್ರಮುಖವಾದುದು ಎಂದರು.
ಚುನಾವಣಾ ಸಂಧರ್ಭದಲ್ಲಿ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಿ, ಮತದಾನದಲ್ಲಿ ಸಕ್ರಿಯವಾಗಿ ಎಲ್ಲರೂ ಪಾಲ್ಗೊಳುವಂತೆ ಮಾಡಬೇಕು ಎಂಬುದು ನಮ್ಮ ದ್ಯೇಯ ಉದ್ದೇಶವಾಗಿದೆ. ಚುನಾವಣಾ ಸಂಧರ್ಭದಲ್ಲಿ ಪ್ರತಿಯೊಬ್ಬರಿಗೂ ಒಂದು ಮತದ ಪ್ರಾಮುಖ್ಯತೆಯನ್ನು ತಿಳಿಸಿ ನೈತಿಕವಾಗಿ ಮತದಾನ ಮಾಡುವಂತೆ ತಿಳಿಸಬೇಕು ಎಂದು ತಿಳಿಸಿದರು.
ಚುನಾವಣೆ ಬೇಸಿಗೆ ಸಮಯದಲ್ಲಿ ನಡೆಯುತ್ತಿದೆ. ಯಾರೊಬ್ಬರೂ ಮತದಾನ ಮಾಡುವಲ್ಲಿ ಅಸಡ್ಡೆ ಮಾಡಬಾರದು. ನನ್ನ ಒಂದು ಮತದಾನದಿಂದ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂಬ ನಕಾರಾತ್ಮಕ ಮನೋಭಾವನೆ ಇಟ್ಟುಕೊಳ್ಳಬಾರದು. ಪ್ರತಿಯೊಂದು ಮತವು ಅಮೂಲ್ಯವಾದದ್ದು ಎಂದರು.
18 ವರ್ಷ ಮೇಲ್ಪಟ್ಟ ಮತದಾರರು, ವಯಸ್ಕ ಪೆÇೀಷಕರು ಹಾಗೂ ಪೌರಕಾರ್ಮಿಕರಲ್ಲಿಯೂ ಕೂಡ ಮತದಾನದ ಅರಿವನ್ನು ಮೂಡಿಸಿ ಹೆಚ್ಚಿನ ಮತದಾನ ಮಾಡಿಸಬೇಕು. ನಗರ ಪ್ರದೇಶ, ಗ್ರಾಮೀಣ ವಿಭಾಗ ಹಾಗೂ ಬುಡಕಟ್ಟು ಜನಾಂಗಳಲ್ಲಿ ಕಡಿಮೆ ಪ್ರಮಾಣದಲ್ಲಿ ಮತದಾನ ಕಳೆದ ಚುನಾವಣಾ ಸಂದಔರ್ಭದಲ್ಲಿ ನಡೆದಿದೆ. ಈ ಬಾರಿ ಪ್ರತಿಯೊಂದು ಪ್ರದೇಶಗಳಿಂದಲೂ ಹೆಚ್ಚಿನ ಮತದಾನ ಮಾಡಿಸಬೇಕು. ಹೆಚ್ಚಾಗಿ ಬುಡಕಟ್ಟು ಜನಾಂಗಗಲ್ಲಿ ಮತದಾನದ ಅರಿವು ಮೂಡಿಸುವುದು ನಮ್ಮ ಪ್ರಮುಖ ಕರ್ತವ್ಯವಾಗಿದೆ. ನಗರ ವಿಭಾಗಗಳಲ್ಲಿ ವಿವಿಧ ರೀತಿಯ ಕಾರ್ಯಗಾರವನ್ನು ನಡೆಸಿ ಚುನಾವಣೆಯ ಅರಿವನ್ನು ಮೂಡಿಸಬೇಕು ಎಂದು ಸೂಚಿಸಿದರು.
ಚುನಾವಣಾ ಸಂದರ್ಭದಲ್ಲಿ ಮತಗಟ್ಟೆಗಳಲ್ಲಿ ಹಿರಿಯರು ಮತ್ತು ಅಂಗವಿಕಲರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಅಂಗನವಾಡಿ ಹಾಗೂ ಶಾಲೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ಕಂಡು ಬಂದಲ್ಲಿ ನೇರವಾಗಿ ನಮಗೆ ತಿಳಿಸಿ ಎಂದರು.
ಚುನಾವಣಾ ಗೀತೆಗಳನ್ನು ಶಾಲೆ ಕಾಲೇಜುಗಳಲ್ಲಿ ಹಾಡಿಸುವುದು, ಚುನಾವಣಾ ಸಂಬಂಧಿತ ನೃತ್ಯ ಸಂಯೋಜನೆಯನ್ನು ಮಾಡಿ ಗ್ರಾಮೀಣ ವಿಭಾಗಳಲ್ಲಿ ಕಾರ್ಯಕ್ರಮವನ್ನು ನಡೆಸಿ ಮತದಾನದ ಅರಿವನ್ನು ಮೂಡಿಸಬೇಕು. ಪ್ರತಿಯೊಂದು ದಾಖಲೆಗಳನ್ನು ಸಹಾ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕಾಗುತ್ತದೆ. ಆದ್ದರಿಂದ ಪ್ರತಿಯೊಂದು ದಾಖಲೆಗಳನ್ನು ಸಂಪೂರ್ಣವಾಗಿ ಸಿದ್ದಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣ ಅವರು ಮಾತನಾಡಿ 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆ ಮಾಡಿಕೊಳ್ಳಬೇಕು. ಪ್ರತಿ ಕಾಲೇಜು ಹಂತದಲ್ಲಿ ಮತದಾರರ ಸಾಕ್ಷರತಾ ಸಂಘಗಳನ್ನು ಸ್ಥಾಪಿಸಿ ಅರಿವು ಮೂಡಿಸಲಾಗುತ್ತಿದೆ. ಆನ್ಲೈನ್ ನಲ್ಲಿಯೂ ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳಬಹುದು. ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.
ಕಾರ್ಯಗಾರದಲ್ಲಿ ಜಿಲ್ಲಾ ಪಂಚಾಯತ್‍ನ ಸಹಾಯಕ ನಿರ್ದೇಶಕರಾದ ವಿಶ್ವನಾಥ್, ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿ ಮತ್ತು ಡಯಟ್ ಪ್ರಾಂಶುಪಾಲರಾದ ನಾಗರಾಜಯ್ಯ, ಮಾಸ್ಟರ್ ತರಬೇತಿದಾರರಾದ ಮಹದೇವಯ್ಯ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ತಾಲೂಕುಗಳ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.