ತಂಬಾಕು ಉತ್ಪನ್ನ ಮಾರಾಟಗಾರರ ಅಂಗಡಿಗಳಿಗೆ ದಾಳಿ

ಚಿತ್ರದುರ್ಗ.ಏ.೧೯; ತಾಲ್ಲೂಕು ತಂಬಾಕು ನಿಯಂತ್ರಣ ಕೋಶದ ಸದಸ್ಯ ಕಾರ್ಯದರ್ಶಿ ಡಾ.ಬಿ.ವಿ.ಗಿರೀಶ್ ನೇತೃತ್ವದ ತಂಡವು ಮಂಗಳವಾರ ಚಿತ್ರದುರ್ಗ ನಗರದ ಡಾನ್‍ಬಾಸ್ಕೊ ಶಾಲೆ, ಬಸವೇಶ್ವರ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜಿನ ಸುತ್ತಮುತ್ತಲಿನ ಅಂಗಡಿಗಳಿಗೆ ಭೇಟಿ ನೀಡಿ, ತಂಬಾಕು ಉತ್ಪನ್ನ ಮಾರಾಟ ಮಾಡುವಂತಹ ಅಂಗಡಿ ಮಾಲೀಕರಿಗೆ ಮಾರಾಟ ಮಾಡದಂತೆ ಎಚ್ಚರಿಕೆ ನೀಡಿ, ದಂಡ ವಿಧಿಸಲಾಯಿತು.ಸೆಕ್ಷನ್ 6ಬಿ ಅಡಿಯಲ್ಲಿ 3 ಪ್ರಕರಣಗಳಿಂದ ರೂ.700/- ಸೆಕ್ಷನ್ 4ರ ಅಡಿಯಲ್ಲಿ 4 ಪ್ರಕರಣಗಳಿಂದ ರೂ.600/- ಒಟ್ಟು ರೂ.1300/- ದಂಡ ವಸೂಲಿ ಮಾಡಿ ಸರ್ಕಾರದ ಖಾತೆಗೆ ಜಮಾ ಮಾಡಲಾಯಿತು.ತಂಬಾಕು ಉತ್ಪನ್ನಗಳನ್ನು ಶಾಲಾ ಆವರಣದ 100 ಗಜದ ಒಳಗೆ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ತಮ್ಮ ಶಿಕ್ಷಣ ಸಂಸ್ಥೆಯನ್ನು ಸಂಪೂರ್ಣವಾಗಿ ತಂಬಾಕು ಮುಕ್ತವನ್ನಾಗಿಸುವ ಜವಾಬ್ದಾರಿ ಹೊಂದಿರುತ್ತಾರೆ. ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ. 4 ಜನ ಬೀಡಿ, ಸಿಗರೇಟು ಸೇದುವುದರಿಂದ ನೂರಾರು ಮಕ್ಕಳು ಮತ್ತು ಆಸ್ಪತ್ರೆಗೆ ಬರುವ ಸಾರ್ವಜನಿಕರು ವಿನಾ ಕಾರಣ passive smokers  ಆಗುತ್ತಾರೆ. ಇದು ಆರೋಗ್ಯದ ಮೇಲೆ ಪರಿಣಾಮ ಉಂಟು ಮಾಡುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಬಾರದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.