ತಂಬಾಕು ತ್ಯಜಿಸಿ ಆರೋಗ್ಯವಂತ ಸಮಾಜ ನಿರ್ಮಿಸಿ

ಗದಗ,ಜ12: ತಂಬಾಕು ವ್ಯಸನದಿಂದ ಸಮಾಜದ ನೈರ್ಮಲ್ಯ ಹಾಗೂ ಆರೋಗ್ಯ ಹಾಳಾಗುತ್ತದೆ. ಈ ಕುರಿತು ಇನ್ನು ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ತಂಬಾಕು ವ್ಯಸನ ತ್ಯಜಿಸುವಂತೆ ಮಾಡಿ ಆರೋಗ್ಯವಂತ ಸಮಾಜ ನಿರ್ಮಿಸಬೇಕೆಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ ಕರೆ ನೀಡಿದರು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ , ಗದಗ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಕಾರ ಗದಗ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇವರ ಸಂಯುಕ್ತಾಶ್ರಯದಲ್ಲಿ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ, ಕೋಟ್ಪಾ -2003 ಹಾಗೂ ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಗದಗ ಜಿಲ್ಲೆಯ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಒಂದು ದಿನದ ಕಾರ್ಯಗಾರ ವನ್ನು ಉದ್ಘಾಟಿಸಿ ಮಾತನಾಡಿದರು.
ಶ್ರೀ ಕ್ಷೇ.ಧ.ಗ್ರಾ.ಯೋ ನಿರ್ದೇಶಕ ಶಿವಾನಂದ ಆಚಾರ್ಯ.ಗದಗ ಮಾತನಾಡಿ ಸರಕಾರದ ಯೋಜನೆಗಳು ಸಾರ್ವಜನಿಕರಿಗೆ ಮುಟ್ಟಿಸಿ ಸಾಮಾಜಿಕ ಅಭಿವೃದ್ಧಿಗೆ ಸದಾ ಸಮ್ಮ ಸಹಕಾರ ಇರುವದಾಗಿ ತಿಳಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯಕ್ರಮ ಅಧಿಕಾರಿ ಡಾ.ಜಗದೀಶ ನುಚ್ಚಿನ್ ತಂಬಾಕು ವ್ಯಸನದಿಂದ ನಮ್ಮ ದೇಹದ ಪ್ರತಿಯೊಂದು ಅಂಗದ ಮೇಲಾಗುವ ದುಷ್ಪರಿಣಾಮ, ಹಾಗೂ ತಂಬಾಕು ವ್ಯಸನದಿಂದ ಅಸಾಂಕ್ರಾಮಿಕ ರೋಗ ಹೆಚ್ಚಾಗಿ ಸಾವು ನೊವುಗಳು ಸಂಭವಿಸುತ್ತಿರುವದಾಗಿ ತಿಳಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರು ಗೋಪಾಲ ಸುರಪುರ ಮಾತನಾಡಿ ತಂಬಾಕು ನಿಯಂತ್ರಣ ಅಧಿನಿಯಮ ಕೋಟ್ಪಾ-2003 ಕಾಯ್ದೆ ಸೆಕ್ಷನ್ 4 ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ, ಸೆಕ್ಷನ್5 ತಂಬಾಕು ಉತ್ಪನ್ನಗಳ ನೇರ ಪರೋಕ್ಷ ಜಾಹಿರಾತು ನಿಷೇಧ,ಸೆಕ್ಷನ್6ಎ 18ವರ್ಷದೋಳಗಿವರಿಗೆ ತಂಬಾಕು ಮಾರಾಟ ನಿಷೇಧ ,ಸೆಕ್ಷನ್ 6ಬಿ ಶಿಕ್ಷಣ ಸಂಸ್ಥೆಗಳ ಸುತ್ತ 100 ಗಜದ ವರೇಗೆ ತಂಬಾಕು ಮಾರಾಟ ಬಳಕೆ ನಿಷಧ, ಸೆಕ್ಷನ್ 7 ತಂಬಕು ಉತ್ಪನ್ನಗಳ ಪ್ಯಾಕ್ ಮೇಲೆ 85%ಆರೋಗ್ಯ ಎಚ್ಚರಿಕೆ ಚಿಹ್ನೆ ಕಡ್ಡಾಯ ಕುರಿತು ಮಾಹಿತಿ ನೀಡಿದರು. ಶ್ರೀಮತಿ ರೇಷ್ಮಾ ಬೆಗಂರವರು ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಮಾಹಿಹಿನೀಡಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋ.ಗದಗ ಸಿಬ್ಬಂದಿಗಳು ಭಾಗವಹಿಸಿದ್ದರು. ಶಿಲ್ಪಾ ಪ್ರಾರ್ಥಿಸಿದರು. ಸುಖೇಶ ವಂದಿಸಿದರು,