ತಂಬಾಕು ದಾಳಿ: ದಂಡ ಸಂಗ್ರಹ


ಶಿವಮೊಗ್ಗ ಜು.೩೧; ನಗರದ ದುರ್ಗಿಗುಡಿಯಲ್ಲಿ ಕೊಟ್ಪಾ ಕಾಯ್ದೆ ಉಲ್ಲಂಘಿಸುವವರನ್ನು ಪತ್ತೆ ಹಚ್ಚಲು ದಾಳಿಗಳನ್ನು ಹಮ್ಮಿಕೊಳ್ಳಲಾಯಿತು.ಶಿವಮೊಗ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್ ಇವರ ನೇತೃತ್ವದಲ್ಲಿ  ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಪೆÇೀಲೀಸ್ ಇಲಾಖೆಯ ಸಹಯೋಗದಲ್ಲಿ ದಾಳಿ ನಡೆಸಿ ಒಟ್ಟು 21 ಪ್ರಕರಣಗಳನ್ನು ದಾಖಲಿಸಿ, ರೂ.3300 ದಂಡವನ್ನು ಸಂಗ್ರಹಿಸಲಾಯಿತು. ತಂಬಾಕು ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸುವ ತಂಬಾಕು ಮಾರಾಟಗಾರರಿಗೆ ಕಾಯ್ದೆ ಕುರಿತು ಅರಿವು ಮೂಡಿಸಿ,ತಿಳುವಳಿಕೆ ನೋಟೀಸ್ ನ್ನು ಜಾರಿ ಮಾಡಲಾಯಿತು. ತಂಬಾಕು ಜಾಹೀರಾತು ಫಲಕವನ್ನು ತೆರವುಗೊಳಿಸಲಾಯಿತು.ಈ ವೇಳೆ ಶಿವಮೊಗ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತರಾಜ್ ಅರಸ್, ಸಮಾಜ ಕಾರ್ಯಕರ್ತ ರವಿರಾಜ್, ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.