
ಚಿತ್ರದುರ್ಗ.ಜ.೨೧; ಆರೋಗ್ಯ ಇಲಾಖೆಯೊಂದಿಗೆ ಎಲ್ಲಾ ಇಲಾಖೆಗಳು ಸಮನ್ವಯದೊಂದಿಗೆ ತಂಬಾಕು ನಿಯಂತ್ರಣ ಕಾರ್ಯಾಚರಣೆಯನ್ನು ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಿವಿಧ ಇಲಾಖೆಯ ಅಧಿಕಾರಿಗಳ ತಂಡವು ನಿಯಮಿತವಾಗಿ ದಾಳಿ ಕೈಗೊಂಡು, ಕೋಟ್ಪಾ ಕಾಯ್ದೆಯನ್ನು ಸಮರ್ಪಕವಾಗಿ ಅನುμÁ್ಠನ ಮಾಡುವುದರ ಮೂಲಕ ಯಶಸ್ವಿಗೊಳಿಸಬೇಕು. ನಮ್ಮ ಆರೋಗ್ಯ ನೋಡಿಕೊಳ್ಳುವ ರೀತಿಯಲ್ಲಿಯೇ ಸಾರ್ವಜನಿಕರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ತಾಕೀತು ಮಾಡಿದರು.ಜಿಲ್ಲೆಯ ಚಲನಚಿತ್ರ ಮಂದಿರಗಳಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಕುರಿತು ಪ್ರಚಾರ ಫಲಕ ಮತ್ತು ಜಾಹಿರಾತುಗಳ ಮೂಲಕ ಪ್ರದರ್ಶಿಸಬೇಕು. ಗ್ರಾಮಗಳಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಂಬಾಕು ನಿಯಂತ್ರಣದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದರು.