ತಂಬಾಕು ಬೆಳೆಗಾರರ ರಕ್ಷಣೆಗೆ ಕಾಂಗ್ರೆಸ್ ಮುಖಂಡರ ಒತ್ತಾಯ

ಮೈಸೂರು, ನ.14: ತಂಬಾಕು ಬೆಳೆಗಾರರ ರಕ್ಷಣೆಗೆ, ಕೇಂದ್ರ ರಾಜ್ಯ ಸರ್ಕಾರಗಳು ಕೂಡಲೇ ಮುಂದಾಗಬೇಕು ಎಂದು ಕಾಂಗ್ರೆಸ್ ಮುಖಂಡರು ಜಂಟಿ ಸುದ್ದಿಗೋಷ್ಠಿ ನಡೆಸಿ ಒತ್ತಾಯಿಸಿದರು.
ಮೈಸೂರು ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಂಸದ ಆರ್. ಧ್ರುವನಾರಾಯಣ್ ರಾಜ್ಯದ ತಂಬಾಕು ಬೆಳೆಗಾರರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ತಂಬಾಕು ಹರಾಜು ವೇಳೆ 300 ಬ್ಯಾರಲ್‍ಗಳ ಪೈಕಿ 92 ಬ್ಯಾರಲ್‍ಗಳು ಮಾತ್ರ ಮಾರಾಟವಾಗಿದ್ದು, ಉಳಿದ ಬ್ಯಾರಲ್ ಗಳನ್ನು ವಾಪಸ್ಸು ಕೊಂಡೊಯ್ಯಲಾಗಿದೆ. ಪರಿಣಾಮ ತಂಬಾಕು ಬೆಳೆಗಾರರು ನಷ್ಟಕ್ಕೆ ಒಳಗಾಗಿದ್ದಾರೆ. ತಂಬಾಕಿಗೂ ಸೂಕ್ತ ದರ ನಿಗದಿ ಮಾಡಬೇಕು. ತಂಬಾಕು ಬೆಳೆಗಾರರಿಗೂ ಆರೋಗ್ಯ ಕಾರ್ಡ್ ವಿತರಣೆ ಮಾಡಬೇಕು. ಈ ಬಗ್ಗೆ ಕೇಂದ್ರ ರಾಜ್ಯ ಸರ್ಕಾರಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಹೆಚ್.ಪಿ. ಮಂಜುನಾಥ್, ಅನಿಲ್ ಚಿಕ್ಕಮಾದು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿಜೆ.ವಿಜಯ್ ಕುಮಾರ್ ಉಪಸ್ಥಿತರಿದ್ದರು.