ತಂಬಾಕು ಮಾರಾಟ ಅಂಗಡಿಗಳಿಗೆ ದಾಳಿ: 41 ಪ್ರಕರಣ ದಾಖಲು

????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಚಿತ್ರದುರ್ಗ,ಏಪ್ರಿಲ್26: ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ನಗರ ಪ್ರದೇಶಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳ ಮೇಲೆ ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ಗುರುವಾರ ದಾಳಿ ನಡೆಸಿ ಒಟ್ಟು 41 ಪ್ರಕರಣಗಳ ದಾಖಲಿಸಿ ತಂಡ ವಿಧಿಸಿದೆ.
 ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕೋಟ್ಪಾ-2003ರ ಅನ್ವಯ ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ  ತಾಲ್ಲೂಕಿನ ನಗರ ಪ್ರದೇಶಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿಯನ್ನು ನಡೆಸಿದೆ.
  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ವಿ.ತುಳಸಿ ರಂಗನಾಥ್ ಅವರ ಮಾರ್ಗದರ್ಶನದಲ್ಲಿ ಕೋಟ್ಪಾ-2003ರ ಕಾಯ್ದೆಯ ಕುರಿತು ಜಾಗೃತಿಯನ್ನು ನೀಡಿ ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು. ಸೆಕ್ಷನ್-4 ಅಡಿಯಲ್ಲಿ 24 ಕೇಸುಗಳನ್ನು ದಾಖಲಿಸಿ ರೂ. 2800 ದಂಡವನ್ನು ಮತ್ತು ಸೆಕ್ಷನ್-6ಎ ಅಡಿಯಲ್ಲಿ 17 ಕೇಸುಗಳನ್ನು ದಾಖಲಿಸಿ ರೂ. 1600 ದಂಡವನ್ನು ವಸೂಲಿ ಮಾಡಲಾಯಿತು. 04 ತಂಬಾಕು ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಯಿತು ಮತ್ತು ಸೆಕ್ಷನ್-4, ಸೆಕ್ಷನ್-6ಎ  ನಾಮಫಲಕಗಳನ್ನು ಅಳವಡಿಸಲಾಯಿತು.
  ತಂಬಾಕು ದಾಳಿಯಲ್ಲಿ ಜಿಲ್ಲಾ ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್, ಸಮಾಜ ಕಾರ್ಯಕರ್ತ ಕೆ.ಎಂ. ತಿಪ್ಪೇಸ್ವಾಮಿ, ಆರೋಗ್ಯ ನಿರೀಕ್ಷಕ ಖಲೀಮುಲ್ಲಾ, ಪೊಲೀಸ್ ಕಾನ್ಸ್‍ಟೇಬಲ್ ಎನ್. ವೆಂಕಟೇಶ್, ಕಿರಿಯ ಪುರುಷ ಆರೋಗ್ಯ ಸಹಾಯಕ ಮಲ್ಲಿಕಾರ್ಜುನ ಸೇರಿದಂತೆ ಮತ್ತಿತರರು ಹಾಜರಿದ್ದರು.