ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜು.೨೭; ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ರಂಗನಾಥ್, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಎನ್.ಕಾಶೀ ಅವರ ಮಾರ್ಗದರ್ಶನದಲ್ಲಿ ಕೋಟ್ಪಾ-2003ರ ಕಾಯ್ದೆಯ ಕುರಿತು ಹೊಳಲ್ಕೆರೆ ಹಾಗೂ ಹೊಸದುರ್ಗ ನಗರ ಪ್ರದೇಶಗಳಲ್ಲಿ ಜಿಲ್ಲಾಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿ ನಡೆಸಿ ದಂಡ ವಿಧಿಸಿದೆ.ತಂಬಾಕು ಮತ್ತು ಕೊರೋನಾ ಕುರಿತು ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ತಡೆಗಟ್ಟಲು ಜಾಗೃತಿ ಮೂಡಿಸಲಾಯಿತು.ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋಡ್‍ಗಳನ್ನು ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 51 ಕೇಸುಗಳನ್ನು ದಾಖಲಿಸಿ ರೂ.5200 ದಂಡವನ್ನು, ಸೆಕ್ಷನ್-6ಎ ಅಡಿಯಲ್ಲಿ 3 ಕೇಸುಗಳನ್ನು ದಾಖಲಿಸಿ ರೂ. 400 ದಂಡವನ್ನು ಮತ್ತು ಸೆಕ್ಷನ್-6ಬಿ ಅಡಿಯಲ್ಲಿ 3 ಕೇಸುಗಳನ್ನು ದಾಖಲಿಸಿ ರೂ. 300 ದಂಡ ವಸೂಲಿ ಮಾಡಲಾಯಿತು.ತಂಬಾಕು ದಾಳಿಯಲ್ಲಿ ಜಿಲ್ಲಾಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ್, ಸಮಾಜ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸಿ.ವಿಶ್ವ, ರಂಗನಾಥ್, ಹೊಸದುರ್ಗ ತಾಲ್ಲೂಕು ನಗರಸಭೆಯವರು, ಪೆÇೀಲಿಸ್ ಇಲಾಖೆಯವರು, ಹೊಳಲ್ಕೆರೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯವರು, ಪೆÇೀಲಿಸ್ ಇಲಾಖೆಯವರು, ಹೊಸದುರ್ಗ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯವರು ಭಾಗವಹಿಸಿದ್ದರು.
========