ತಂಬಾಕು ಮಾರಾಟ ಅಂಗಡಿಗಳಿಗೆ ದಾಳಿ: 11 ಪ್ರಕರಣ ದಾಖಲು, ರೂ.1100 ದಂಡ ವಸೂಲಿ

ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಆ.೧೯; ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ಚಿತ್ರದುರ್ಗ ನಗರ ಪ್ರದೇಶಗಳಲ್ಲಿ ಬಾರ್ ಮತ್ತು ರೆಸ್ಟೋರೆಂಟ್‍ಗಳಿಗೆ ಹಾಗೂ ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಶುಕ್ರವಾರ ದಾಳಿ ಮಾಡಿ ದಂಡ ವಿಧಿಸಿದೆ.ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಜಾಗೃತಿ ಮೂಡಿಸಲಾಯಿತು.ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು ಮತ್ತು ಸೆಕ್ಷನ್-4 ಅಡಿಯಲ್ಲಿ 11 ಕೇಸುಗಳನ್ನು ದಾಖಲಿಸಿ ರೂ.1100 ದಂಡವನ್ನು ವಸೂಲಿ ಮಾಡಲಾಯಿತು.ತಂಬಾಕು ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್, ಸಬ್ ಇನ್ಸ್‍ಪೆಕ್ಟರ್ ಆರ್.ದಾದಾಪೀರ್,  ಅಬಕಾರಿ ಕಾನ್ಸ್‍ಟೇಬಲ್ ಸುರೇಶ ಹೆಗಡಿ, ಅಬಕಾರಿ ಇಲಾಖೆ ಅಧಿಕಾರಿಗಳು ಇದ್ದರು.

=======