ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜು.೭; ತಂಬಾಕು ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ತಿಳಿಸಿದರು.ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕೋಟ್ಪಾ-2003ರ ಕಾಯ್ದೆಯ ಪರಿಣಾಮಕಾರಿ ಅನುಷ್ಟಾನ, ಸಾಮಥ್ರ್ಯಾಭಿವೃದ್ಧಿ ಮತ್ತು ಮೇಲ್ವಿಚಾರಣೆ ಕುರಿತು ಪೋಲಿಸ್ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಕೋಟ್ಪಾ-2003 ಕಾಯ್ದೆಯ ಕುರಿತಂತೆ ಎಲ್ಲಾ ಪೋಲಿಸ್ ಸಿಬ್ಬಂದಿಗಳಿಗೆ ತಂಬಾಕು ಕಾರ್ಯಕ್ರಮವನ್ನು ಇನ್ನು ಹೆಚ್ಚಿನ ಮಟ್ಟದಲ್ಲಿ ಯಶಸ್ವಿಗೊಳಿಸುವಂತೆ, ತಂಬಾಕು ದಾಳಿಯ ಸಮಯದಲ್ಲಿ ಸಹಕರಿಸುವಂತೆ ಮತ್ತು ಚಿತ್ರದುರ್ಗ ಜಿಲ್ಲೆಯನ್ನು ತಂಬಾಕು ಮುಕ್ತ ಜಿಲ್ಲೆಯನ್ನಾಗಿಸೋಣ ಎಂದು ಮಾಹಿತಿ ನೀಡಿದರು.ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ ಅವರು, ಕೋಟ್ಪಾ-2003ರ ಕಾಯ್ದೆಯ ಸೆಕ್ಷನ್-4,5,6ಎ,6ಬಿ ಮತ್ತು 7ರ ಕಾನೂನಿನ ಬಗ್ಗೆ ಮತ್ತು ವಿಧಿಸಿವು ದಂಡದ ಮೊತ್ತದ ಬಗ್ಗೆ, ಅಂಗಡಿಯವರು ಹಾಕಬೇಕಾದ ಬೋರ್ಡ್‍ಗಳ ಬಗ್ಗೆ ಮಾಹಿತಿ ನೀಡಿದರು.ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತ ಕೆ.ಎಂ. ತಿಪ್ಪೇಸ್ವಾಮಿ, ಚಿತ್ರದುರ್ಗ ತಂಬಾಕು ವ್ಯಸನ ಮುಕ್ತ ಕೇಂದ್ರಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ 30ಕ್ಕೂ ಹೆಚ್ಚು ಪೋಲಿಸ್ ಅಧಿಕಾರಿಗಳು ಭಾಗವಹಿಸಿದ್ದರು.