ತಂಬಾಕು ಸೇವನೆಯಿಂದ ಮಾರಣಾಂತಿಕ ಕಾಯಿಲೆಗಳು ಬರುತ್ತವೆ

ಕೆ.ಆರ್.ಪೇಟೆ. ಜೂ.01: ತಂಬಾಕು ಸೇವನೆಯಿಂದ ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು, ಶ್ವಾಸಕ್ಕೆ ಸಂಬಂಧಿಸಿದ ಕಾಯಿಲೆಗಳು ಸೇರಿದಂತೆ ಅನೇಕ ಮಾರಣಾಂತಿಕ ಕಾಯಿಲೆಗಳು ಬರುತ್ತವೆ ಎಂದು ತಾಲೂಕು ಆರೋಗ್ಯಾಧಿಕಾರಿ ಮಧುಸೂದನ್ ತಿಳಿಸಿದರು.
ಅವರು ಪಟ್ಟಣದ ಬಿಸಿಎಂ ಹಾಸ್ಟೆಲ್‍ನಲ್ಲಿರುವ ಕೋವಿಡ್ ಕೇರ್ ಸೆಂಟರ್‍ನಲ್ಲಿ ಕೋವಿಡ್ ರೋಗಿಗಳಿಗೆ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ತಂಬಾಕು ಸೇವನೆಯಿಂದಾಗುವ ಅನಾಹುತಗಳ ಬಗ್ಗೆ ಮನವರಿಕೆ ಮಾಡಿ ಮಾತನಾಡಿದರು.
ತಂಬಾಕು ಸೇವನೆಯಿಂದ ಕರ್ನಾಟಕದಲ್ಲಿ 28% ವ್ಯಕ್ತಿಗಳು ಒಂದಲ್ಲ ಒಂದು ರೀತಿಯ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ 11% ಜನ ಧೂಮಪಾನದಿಂದ, ತಂಬಾಕುಗಳ ಸೇವನೆ ಮಾಡುತ್ತಿದ್ದು ಪ್ರತೀವರ್ಷ ತಂಬಾಕು ಸೇವನೆಯಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. 18ಕ್ಕಿಂತ ಕಡಿಮೆ ವಯಸ್ಸಿನ ವಿದ್ಯಾರ್ಥಿಗಳು ತಂಬಾಕು ಸೇವನೆಯಲ್ಲಿ ತೊಡಗಿಸಿಕೊಂಡು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ 42% ಜನರು ಧೂಮಪಾನದ ಅಭ್ಯಾಸ ಮಾಡಿಕೊಂಡಿದ್ದಾರೆ. ತಂಬಾಕು ಸೇವನೆಯಿಂದ ವಿವಿಧ ರೀತಿಯ ಕ್ಯಾನ್ಸರ್ ಕಾರ್ಯಗಳು ಬರುತ್ತಿವೆ.
ತಂಬಾಕು ಸೇವನೆಯಿಂದಾಗುವ ಅನಾಹುತಗಳ ಬಗ್ಗೆ ಅನೇಕ ಕಾನೂನುಗಳನ್ನು ಜಾರಿಗೊಳಿಸಲಾಗಿದೆ. ಶಿಕ್ಷಣ ಸಂಸ್ಥೆಗಳ ಅಕ್ಕ-ಪಕ್ಕದ 100 ಮೀಟರ್ ಜಾಗದಲ್ಲಿ ತಂಬಾಕು ಉತ್ತರವನ್ನು ಮಾರಾಟ ಮಾಡುವುದನ್ನು ನಿಷೀಧಿಸಿದೆ. 18 ವ?ರ್Àದ ಒಳಗಿನ ವಿದ್ಯಾರ್ಥಿಗಳು ಧೂಮಪಾನವನ್ನು ಕಡ್ಡಾಯವಾಗಿ ನಿಷÉೀಧಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿಸಿದೆ. ತಂಬಾಕಿನಲ್ಲಿ ನಿಕೋಟಿನ್ ಎಂಬ ರಾಸಾಯನಿಕ ವಸ್ತು ತಂಬಾಕು ಬೇಕು ಎಲ್ಲರೂ ತಂಬಾಕನ್ನು ತಂಬಾಕನ್ನು ತ್ಯಜಿಸಬೇಕು ಆರೋಗ್ಯವಂತ ಜೀವನವನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು ತಂಬಾಕನ್ನು ತ್ಯಜಿಸುವುದರಿಂದ ರಕ್ತದ ಒತ್ತಡ ಮತ್ತು ಹೃದಯ ಬಡಿತ ಸಾಮಾನ್ಯ ಹಂತಕ್ಕೆ ಬರುತ್ತದೆ ದೇಹದಲ್ಲಿ ಕಾರ್ಬನ್ ಮಾನಾಕ್ಸೈಡ್ ಪ್ರಮಾಣ ಕಡಿಮೆಯಾಗುತ್ತದೆ ಹೃದಯಾಘಾತವಾಗುವ ಸಂಭವ ಕಡಿಮೆ ಇರುತ್ತದೆ. ಬಾಯಿ ಅಲ್ಸರ್ ಕಡಿಮೆಯಾಗುತ್ತದೆ. ಹಣದ ಉಳಿತಾಯ ಆಗುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಪುರಸಭಾ ಮುಖ್ಯಾಧಿಕಾರಿ ಸತೀಶ್‍ಕುಮಾರ್ ಡಾ.ರೋಹಿತ್, ಡಾ.ಶಶಿಕಾಂತ್, ಸಿಡಿಪಿಒ ದೇವಕುಮಾರ್, ಆರೋಗ್ಯ ಶಿಕ್ಷಣಾಧಿಕಾರಿ ಶಿವಮ್ಮ, ಸೌಮ್ಯ ಸೇರಿದಂತೆ ಹಲವರು ಹಾಜರಿದ್ದರು.