ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ : ಕಾಯ್ದೆ ಉಲ್ಲಂಘನೆ ದಂಡ

ದಾವಣಗೆರೆ ಸೆ.24; ಹರಿಹರ ತಾಲ್ಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ತಂಬಾಕು ನಿಯಂತ್ರಣ ಕೋಶ ನೇತೃತ್ವದ ತಂಡದ ವತಿಯಿಂದ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮದ ಅಡಿಯಲ್ಲಿ ಒಟ್ಟು 37 ಪ್ರಕರಣ ದಾಖಲಿಸಿ 4850 ರೂ ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು ಹಾಗೂ ಜಾಗೃತಿ ಮೂಡಿಸಲಾಯಿತು.ತನಿಖಾ ತಂಡವು ಮಲೇಬೆನ್ನೂರಿನ ಮುಖ್ಯ ರಸ್ತೆ, ಸಂತೆ ರಸ್ತೆಯ ಸುತ್ತ-ಮುತ್ತ ಹೋಟೆಲ್ ಅಂಗಡಿ, ಮಳಿಗೆ ಬಾರ್, ರೆಸ್ಟೋರೆಂಟ್, ಪಾನ್‌ಶಾಪ್ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಲಾಯಿತು. ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲಿಕರು ಧೂಮಪಾನ ನಿಷೇಧದ ನಾಮಫಲಕವನ್ನು ಕಟ್ಟು ನಿಟ್ಟಾಗಿ ಪ್ರದರ್ಶಿಸಲು ಹಾಗೂ ಅಳವಡಿಸಲು ತಂಡ ತಾಕೀತು ಮಾಡಲಾಯಿತು.ಹರಿಹರ ತಹಶೀಲ್ದಾರರು ಹಾಗೂ ತಾಲ್ಲೂಕು ತನಿಖಾ ತಂಡದ ಅಧ್ಯಕ್ಷ ಕೆ.ಬಿ.ರಾಮಚಂದ್ರಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಚಂದ್ರಮೋಹನ್.ಡಿ.ಎA, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಉಮ್ಮಣ್ಣ.ಎಂ, ಬಿ.ಹೆಚ್.ಈ.ಓ ಎಸ್.ಹೆಚ್.ಪಾಟೀಲ್, ಉಪ ತಹಶೀಲ್ದಾರ್ ರವಿ.ಆರ್ ಹಾಗೂ ರಾಷ್ಟಿçÃಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್, ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ, ಹಾಗೂ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು.