ಕಲಬುರಗಿ: ಜೂ. 03 : ತಂಬಾಕು ಸೇವನೆಯಿಂದ ಕ್ಯಾನ್ಸರ್‍ಗೆ ಆಹ್ವಾನವಾಗುತ್ತಿದ್ದು, ಇದರಿಂದ ಶ್ವಾಸಕೋಶ ಕಾಯಿಲೆಗಳಿಗೆ ತೊಂದರೆ ಉಂಟುಮಾಡುತ್ತಿದ್ದೆ ಇದನ್ನು ತಪ್ಪಿಸಲು ಅಧಿಕಾರಿಗಳು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಶ್ರಮಿಸಬೇಕೆಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಮ್ಮದ್ ಅನ್ವರ್ ಹುಸೇನ ಮೊಗಲಾನಿ ಅವರು ಹೇಳಿದರು.
ಶನಿವಾರಂದು ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಹೆಚ್.ಸಿ.ಜಿ. ಕ್ಯಾನ್ಸರ್ ಆಸ್ಪತ್ರೆ, ಎನ್.ಓ.ಹೆಚ್.ಪಿ., ಎನ್.ಎಸ್.ಎಸ್. ಘಟಕ, ಕೃಷಿ ಮಹಾವಿದ್ಯಾಲಯ, ವಿವಿಧ ಸಂಘ-ಸಂಸ್ಥೆಗಳು ಮತ್ತು ಜಿಲ್ಲಾ ತಂಬಾಕು ನಿಯಂತ್ರಣಾ ಕೋಶ ಇವುಗಳ ಸಂಯುಕ್ತಾಶ್ರಯದಲ್ಲಿ “ನಮಗೆ ಆಹಾರ ಬೇಕು, ತಂಬಾಕು ಅಲ್ಲ” ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆ ಸಸಿಗೆ ನೀರೆರೆಯುವ ಮೂಲಕ ಉದ್ಫಾಟಿಸಿ ಮಾತನಾಡಿದರು.
ತಂಬಾಕು ಸೇವನೆಯಿಂದ ಮನುಷ್ಯನು ಅನೇಕ ರೋಗಗಳಿಗೆ ತುತ್ತಾಗುತ್ತಿದ್ದು, ಇದನ್ನು ತಪ್ಪಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ತಿಳಿಸಿದರು.13-14 ವರ್ಷದೊಳಗಿನ ಮಕ್ಕಳು ಇತ್ತೀಚಿನ ದಿನಗಳಲ್ಲಿ ಸೇವನೆ ಮಾಡುತ್ತಿದ್ದಾರೆ. ತಂಬಾಕು ಸೇವನೆ ಮಾಡುವ ಬದಲು ದೇಹಕ್ಕೆ ಒಳ್ಳೆಯ ಆಹಾರವನ್ನು ಸೇವಿಸಿದ್ದರೆ ಒಳ್ಳೆಯ ವ್ಯಕ್ತಿಯಾಗಿ ಬಾಳಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಸಿಗರೇಟು ಅಥವಾ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ ಉಲ್ಲಂಘನೆಯ ಶಿಕ್ಷಾರ್ಹ ಅಪರಾಧವಾಗಿದ್ದು,ರೂ.200/- ರವರೆಗೆ ಅಔಖಿPಂ 2003 ರ ಕಾಯ್ದೆಯಡಿಯಲ್ಲಿ ದಂಡ ವಿಧಿಸಲಾಗುವುದು ಎಂದರು.
ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಸಹ ನಿರ್ದೇಶಕರಾದ ಡಾ. ಶಂಕ್ರಪ್ಪ ಮೈಲಾರಿ ಅವರು ಮಾತನಾಡಿ, ತಂಬಾಕು ಸೇವನೆಯಿಂದ ಮನುಷ್ಯನ ಮೇಲೆ ಅನೇಕ ದುಷ್ಪರಿಣಾಗಳು ಬೀರುತ್ತದೆ ಕ್ಯಾನ್ಸರ್,ಹೃದಯಕ್ಕೆ ಸಂಬಂಧಿಸಿದಂತೆ ಕಾಯಿಲೆಗಳು ಬಾಯಿ ಕ್ಯಾನ್ಸರ್ ಅನೇಕ ರೋಗಗಳನ್ನು ಉಂಟಾಗುತ್ತಿದ್ದು, ಇದನ್ನು ನಾವು ಇನ್ನೂ ಹೆಚ್ಚಿನ ಅರಿವು ಮೂಡುವ ಕೆಲಸ ಮಾಡಬೇಕೆಂದರು.
ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ಸುರೇಶ ಮೇಕಿನ ಸ್ವಾಗತಿಸಿ ಮಾತನಾಡಿ, 1857 ನೇ ಇಸ್ವವಿಯಲ್ಲಿ ಆರೋಗ್ಯ ಸಂಸ್ಥೆಯ ಅಂಗೀಕರ ತೆಗೆದುಕೊಂಡಿತ್ತು ಪ್ರತಿ ವರ್ಷ ಮೇ. 31 ರಂದು ತಂಬಾಕಿನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು. ಹೃದಯ ಸಂಬಂಧಿಸಿದ ಕಾಯಿಲೆಗಳು ರಕ್ತನಾಳಗಳು ಕ್ಯಾನ್ಸರ್ ಪ್ರತಿ 6-7 ನಿಮಿಷಕ್ಕೆ ಮನುಷ್ಯ ಪ್ರಾಣವನ್ನು ಕಳೆದುಕೊಳ್ಳುತ್ತಾನೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ, ಕೃಷಿ ಇಲಾಖೆ ಉಪನಿರ್ದೇಶಕಿ ಅನುಸೂಯ ಎಂ ಹೂಗರ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾದ ಎನ್.ಓ.ಹೆಚ್.ಪಿ. ಅಧಿಕಾರಿ ಸಂದ್ಯಾ ಡಾಂಗೆ ಬಾಯಿ ಕ್ಯಾನ್ಸರ್ ಹಾಗೂ ವಿಕಿರಣ ಆಂಕೊಲಾಜಿ ಹೆಚ್.ಸಿ.ಜಿ ಕ್ಯಾನ್ಸರ್ ಆಸ್ಪತ್ರೆಯ ಡಾ. ಶಾಂತಲಿಂಗ ನಿಗ್ಗುಡಗಿ ತಂಬಾಕು ಸೇವೆನೆಯಿಂದಾಗುವ ದುಷ್ಪರಿಣಾಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಮುಖ್ಯಸ್ಥರು ಡೀನ್ ಡಾ.ಎಂ.ಎಂ. ಧನೋಜಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದಕ್ಕೂ ಮೊದಲು ಕೃಷಿ ಇಲಾಖೆಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಮ್ಮದ್ ಅನ್ವರ್ ಹುಸೇನ ಮೊಗಲಾನಿ ಸಸಿಗೆ ನೀರು ಉಣ್ಣಿಸಿದರು ಹಾಗೂ ಪತ್ರಿಜ್ಞಾ ವಿಧಿ ಬೋಧಿಸಿದರು.
ಇದೇ ಸಂದರ್ಭದಲ್ಲಿ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳಿಗೆ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಬಂದವರಿಗೆ ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಕೃಷಿ ಮಹಾವಿದ್ಯಾಲಯ ಸಂಯೋಜಕ ಅಧಿಕಾರಿ ಡಾ. ತ್ರಿವೇಣಿ ಸಮಾಜ ಕಾರ್ಯಕರ್ತರಾದ ಆರುತಿ ಧನುಶ್ರೀ, ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು ತಾಲೂಕಾ ಆರೋಗ್ಯಾಧಿಕಾರಿಗಳು ತಂಬಾಕು ನಿಯಂತ್ರಣ ಅಧಿಕಾರಿಗಳು ಕೃಷಿ ಇಲಾಖೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.