ತಂಬಾಕು ಸೇವನೆ ಬೇಡ: ಡಾ.ಸಂಧ್ಯಾ ಕಾನೇಕರ್

ಶಹಾಬಾದ್,ಜೂ.8-ಶಹಾಬಾದ್ ಪಟ್ಟಣದ ಮುಗಳನಾಗವಿ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಮುದಾಯ ಆರೋಗ್ಯ ಕೇಂದ್ರ ಶಹಾಬಾದ್, ಕೆಎಚ್‍ಪಿಟಿ ಸ್ಪೂರ್ತಿ ಯೋಜನೆ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ ಹದಿ ಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಎನ್‍ಓಎಚ್‍ಪಿ ಕಾರ್ಯಕ್ರವi ಅಧಿಕಾರಿ ಡಾ.ಸಂಧ್ಯಾ ಕಾನೇಕರ್ ಅವರು ಮಾತನಾಡುತ್ತ ತಂಬಾಕು ಸೇವನೆ ವಿಶ್ವವು ಎದುರಿಸುತ್ತಿರುವ ಅತಿ ದೊಡ್ಡ ಸಾರ್ವಜನಿಕ ಆರೋಗ್ಯ ಸಮಸ್ಯೆಗಳಲ್ಲಿ ಒಂದಾಗಿದೆ. ತಂಬಾಕು ಸೇವನೆಯಿಂದ ಹೃದಯ ಸಂಬಂಧಿ ಕಾಯಿಲೆಗಳು, ಉಸಿರಾಟದ ಸಮಸ್ಯೆ ಮತ್ತು ಕ್ಯಾನ್ಸರ್‍ದಂತಹ ದೊಡ್ಡ ಸಾಂಕ್ರಾಮಿಕವಲ್ಲದ ರೋಗಗಳು ಇತ್ತೀಚಿನಗಳಲ್ಲಿ ಸಾಮಾನ್ಯವಾಗಿ ಯುವಜನರಲ್ಲಿ ಕಾಣುತ್ತಿದೆ. ವಿಶೇಷವಾಗಿ ಬಾಯಿ ಕ್ಯಾನ್ಸರ್ ನಾಲಿಗೆ ಧ್ವನಿ ಪೆಟ್ಟಿಗೆ ಮತ್ತು ಗಂಟಲ ಕುಳಿ ಅನ್ನನಾಳ ಹೊಟ್ಟೆ ಪಿತ್ತಕೋಶದ ಸಮಸ್ಯೆ, ಶೇ. 40% ಕ್ಷಯ ರೋಗ ಸಂಬಂಧ ಪಟ್ಟಂತ ಕಾಯಿಲೆಗಳು ತಂಬಾಕು ಸೇವನೆಯಿಂದ ಬರುತ್ತಿವೆ ಎಂದು ಹೇಳಿದರು.
ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಸುಜಾತಾ ಪಾಟೀಲ್ ರವರು ಮಾತನಾಡುತ್ತ, ಭಾರತ ಸರ್ಕಾರ 2007-2008ರಲ್ಲಿ 11ನೇ ಪಂಚವಾರ್ಷಿಕ ಯೋಜನೆಯ ಅವಧಿಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಪ್ರಾರಂಭಿಸಿತ್ತು. ತಂಬಾಕು ಉತ್ಪನ್ನಗಳ ಉತ್ಪಾದನೆ ಮತ್ತು ಸರಬರಾಜನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ. ತಂಬಾಕು ವ್ಯಸನಿಗಳಿಗೆ ತಂಬಾಕು ಸೇವನೆಯನ್ನು ತ್ಯಜಿಸಲು ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ಸ್ಪೂರ್ತಿ ಯೋಜನೆಯ ಜಿಲ್ಲಾ ಸಂಯೋಜಕರಾದ ಶಿವಯೋಗಿ ಮಠಪತಿ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ ಸೌಲಭ್ಯಗಳು ಹದಿಹರೆಯದ ಹೆಣ್ಣು ಮಕ್ಕಳಿಗೆ ವಿದ್ಯಾವಂತರನ್ನಾಗಿ ಮಾಡಿ ಅವರ ವೈಯಕ್ತಿಕ ಸಮಸ್ಯೆಗಳಿಗೆ ಸ್ಪೂರ್ತಿ ಯೋಜನೆ ಸಹಾಯಕವಾಗಿದೆ ಎಂದು ಹೇಳಿದರು.
ಆಪ್ತ ಸಮಾಲೋಚಕ ಅಮರೇಶ್ ಇಟ್ಟಗಿ, ಸ್ನೇಹ ಕ್ಲಿನಿಕ್ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಬಗ್ಗೆ ವಿವರವಾಗಿ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪಶು ವೈದ್ಯಾಧಿಕಾರಿ ಡಾ.ದೀಪ್ತಿ ಅಲ್ವರ್ತಿ ಮಾತನಾಡುತ್ತ ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿದ್ದರೆ ಪ್ರಾಣಿಗಳು ಕೂಡ ಸ್ವಚ್ಛವಾಗಿರುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ಜಗನ್ನಾಥ್‍ರಾವ್ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಹದಿಹರೆಯದ ಮಕ್ಕಳು ಊರಿನ ನಾಗರಿಕರು ಉಪಸ್ಥಿತರಿದ್ದರು. ತಾಲೂಕು ಸಂಯೋಜಕರು ಸ್ಪೂರ್ತಿ ಯೋಜನೆಯ ರೇಣುಕಾ ಅವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.