ತಡೆಗೋಡೆಗೆ ಕಾರು ಡಿಕ್ಕಿ, ಬೆಂಕಿ ;ಪ್ರಯಾಣಿಕರು ಪಾರು

ಮಂಡ್ಯ,ಏ.27- ಚಾಲಕನ‌ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದು ಹೊತ್ತಿ ಉರಿದ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಸಮೀಪದ ನಲ್ಲಿಗೆರೆ ಕ್ರಾಸ್ ಬಳಿ ನಡೆದಿದೆ.
ಬೆಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಕಾರು ಅತಿ ವೇಗದಲ್ಲಿ ಬಂದು ಡಿವೈಡರ್ ದಾಟಿ ಬಲಬದಿ ರಸ್ತೆಗೆ ಇಳಿದಿದೆ. ತಡೆಗೋಡೆಗೆ ಡಿಕ್ಕಿಯಾಗ್ತಿದ್ದಂತೆ ಕ್ಷಣಾರ್ಧದಲ್ಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬೆಳ್ಳೂರು ಪೊಲೀಸ್​​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.