ತನಿಖಾ ಸಂಸ್ಥೆ ವಿಶ್ವಾಸ, ಪ್ರಧಾನಿ ನಾಶ

ಜೈಪುರ,ನ.೧೯?ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳ ಸೇರಿದಂತೆ ತನಿಖಾ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ಪ್ರಧಾನಿ ನಾಶಪಡಿಸುತ್ತಿದ್ದಾರೆ ಎಂದು ರಾಜಸ್ತಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಾಗ್ದಾಳಿ ನಡೆಸಿದ್ದಾರೆ.ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಬಿಜೆಪಿ ಅಧಿಕಾರದಲ್ಲಿರುವ ಮತ್ತು ಅದರ ಮಿತ್ರ ಪಕ್ಷದ ನಾಯಕರ ವಿರುದ್ದ ತನಿಖಾ ಸಂಸ್ಥೆಗಗಳು ಯಾಕೆ ದಾಳಿ ನಡೆಸುತ್ತಿಲ್ಲ. ಅವರಾರು ಭ್ರಷ್ಟಾಚಾರ ಮಾಡಿಲ್ಲವೇ ಎಂದು ಪ್ರಶ್ನಿಸಿದ್ದಾರೆ.ರಾಜಸ್ಥಾನದ ಎಲ್ಲಾ ೨೦೦ ಸ್ಥಾನಗಳಿಗೆ ನವೆಂಬರ್ ೩೦ ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಡಿಸೆಂಬರ್ ೩ ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆಯಲ್ಲಿ ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ ಅವರು ಪ್ರಧಾನಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ೧೫೦ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಇಡೀ ಜೀವನದಲ್ಲಿ ಒಂದು ಇಂಚು ಭೂಮಿಯನ್ನು ಸಹ ಖರೀದಿಸಿಲ್ಲ, ಆದ್ದರಿಂದ ಭಯಪಡುವ ಅಗತ್ಯವಿಲ್ಲ ತಾವೊಬ್ಬ ’ಸಂತೃಪ್ತಿ’ ರಾಜಕಾರಣಿ ಎಂದಿದ್ದಾರೆ ಕೇಂದ್ರದ ತನಿಖಾ ಸಂಸ್ಥೆಗಳು ವಿರೋಧ ಪಕ್ಷದ ನಾಯಕರನ್ನು ಮಾತ್ರ ಏಕೆ ಗುರಿಯಾಗಿಸಿಕೊಂಡಿದ್ದಾರೆ ಎಂದು ಮೋದಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಅವರು ಇಡೀ ದೇಶದಲ್ಲಿ ೪೫೦ ರೂ.ಗೆ ಎಲ್‌ಪಿಜಿ ಸಿಲಿಂಡರ್ ಏಕೆ ನೀಡುವುದಿಲ್ಲ ಎಂದು ಪ್ರಶ್ನಿಸಿದ ಅವರು ರಾಜ್ಯದಲ್ಲಿ “ಬಿಜೆಪಿಯ ಪರಿಸ್ಥಿತಿ ಎಂದಿಗೂ ಕೆಟ್ಟದಾಗಿದೆ ಎಂದಿದ್ದಾರೆ.ರಾಜ್ಯದಲ್ಲಿ ಶ್ರೀರಾಮ ಮತ್ತು ಹನುಮ ಜಯಂತಿಯಂದು ಧಾರ್ಮಿಕ ಮೆರವಣಿಗೆಗಳಿಗೆ ಯಾವುದೇ ನಿಷೇಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹೆದರುವ ಅಗತ್ಯವಿಲ್ಲ

ನನ್ನ ಜೀವನದಲ್ಲಿ ಒಂದು ಇಂಚು ಭೂಮಿಯನ್ನೂ ಖರೀದಿಸಿಲ್ಲ. ಹೀಗಾಗಿ ಭಯಪಡುವ ಅಗತ್ಯವಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ದ ನೇರ ವಾಗ್ದಾಳಿ ನಡೆಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪಗಳನ್ನು ಹೊರಿಸಿದ್ದಾರೆ .ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಕಂಡುಬಂದರೆ ಜೈಲಿಗೆ ಹೋಗಲು ಸಿದ್ಧ ಎಂದು ಹೇಳಿದ್ದಾರೆ.