ತನಿಖೆಯಿಂದ ಸಂತ್ಯಾಶ ಬಹಿರಂಗ : ಶೆಟ್ಟರ್

ಹುಬ್ಬಳ್ಳಿ, ಮಾ 27: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ವಿಚಾರವಾಗಿ ಎಸ್‍ಐಟಿ ತನಿಖೆ ನಡೆಯುತ್ತಿದೆ. ಸೂಕ್ತ ತನಿಖೆಯ ನಂತರ ಸತ್ಯಾಂಶ ಹೊರಬರಲಿದೆ ಎಂದು ಮಧ್ಯಮ ಹಾಗೂ ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಎಸ್‍ಐಟಿ ಸತತ ತನಿಖೆಯನ್ನು ಮಾಡುತ್ತಿದೆ. ತನಿಖೆಯಿಂದ ಪೂರ್ಣ ಸತ್ಯಾಂಶವೇನೆಂಬುದು ಹೊರಬರಲಿದೆ ಎಂದರು.
ಆಡಿಯೋದಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೆಸರು ಪ್ರಸ್ತಾಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ತನಿಖೆಯಿಂದ ಎಲ್ಲವೂ ಹೊರಬರಲಿದೆ ಎಂದು ಸಚಿವ ಶೆಟ್ಟರ್ ನುಡಿದರು.