ಯಾದಗಿರಿ: ಏ, 06;ಚುನಾವಣೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಬ್ಬ-ಹರಿದಿಗಳಿದ್ದಂತೆ ಎಲ್ಲರು ಸಡಗರ ಸಂಭ್ರಮದಿಂದ ಪಾಲ್ಗೊಳ್ಳುವ ಮೂಲಕ ಪ್ರತಿಯೊಬ್ಬರು ತಪ್ಪದೆ ಮತದಾನ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಡಾ. ಟಿ ರೋಣಿ ಅವರು ಹೇಳಿದರು.
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕ ಪಂಚಾಯಿತಿ ಯಾದಗಿರಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಮೈಲಾಪೂರ ಅಗಸಿಯಿಂದ ಗಾಂಧಿ ವೃತ್ತದ ವರೆಗೆ ಹಮ್ಮಿಕೊಂಡ ಕ್ಯಾಂಡಲ್ ಮಾ??9 ಜಾಥ ಕರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.
ರ್ನಾಟಕ ವಿಧಾನಸಭಾ ಸರ್ವತ್ರಿಕ ಚುನಾವಣೆ-2023 ಮೇ 10ರಂದು ನಡೆಯುವ ಚುನಾವಣೆಯಲ್ಲಿ ರ್ಹ ಮತದಾರರು ತಮ್ಮ ಮತದಾನದ ಹಕ್ಕನ್ನು ತಪ್ಪದೆ ಚಲಾಯಿಸುವಂತೆ ಮಾಡಲು (ಸ್ವೀಪ್) ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಚಟುವಟಿಕೆಗಳಡಿ ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸಲು ಮೊಂಬತ್ತಿ ಇಡಿದು ಜಾಥ ಮಾಡುವ ಮೂಲಕ ಜನರಿಗೆ ತಮ್ಮ ಮತದಾನದ ಹಕ್ಕು ಚಲಾಯಿಸುವಂತೆ ಮನವರಿಕೆ ಮಾಡುವ ವಿನೂತನ ಪ್ರಕ್ರಿಯೆ ಎಂದರು.
ಸುಭದ್ರ ಸರಕಾರ ರಚನೆಗೆ ಭಾರತೀಯ ಸಂವಿಧಾನ 18 ರ್ಷ ತುಂಬಿದ ಪ್ರತಿಯೊಬ್ಬ ಪ್ರಜೆಗೂ ನರ್ಭಿತವಾಗಿ ಮತದಾನ ಮಾಡಲು ಹಕ್ಕು ನೀಡಿದೆ, ಅಂತಹ ಹಕ್ಕುನ್ನು ಚಲಾಯಿಸುವದು ಪ್ರತಿಯೊಬ್ಬರ ರ್ತವ್ಯ ಹಾಗಾಗಿ, ಎಲ್ಲರೂ ತಪ್ಪದೆ ತಮ್ಮ ಹತ್ತಿರದ ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡಬೇಕು ಎಂದು ಹೇಳಿದರು.
ಸಹಾಯಕ ಆಯುಕ್ತರಾದ ಶಾಲಂ ಹುಸೇನ್ ಅವರು ಮಾತನಾಡಿ, ಕಳೆದ 2018ರ ರ್ನಾಟಕ ವಿಧಾನಸಭಾ ಸರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ನಿರೀಕ್ಷಿತ ಮತದಾನ ದಾಖಲಾಗದೆ ಕಡಿಮೆ ಮತದಾನ ದಾಖಲಾದ ಹಿನಲ್ಲೆಯಲ್ಲಿ ಜಿಲ್ಲೆಯಾದ್ಯಂತ ವಿವಿಧ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಂಡು ಮತದಾರರಿಗೆ ಮತದಾನದ ಕುರಿತು ಜಾಗೃತಿ ಮೂಡಿಸುವ ಮೂಲಕ ಮತದಾನ ಪ್ರಮಾಣ ಹೆಚ್ಚಿಸಬೇಕಿದೆ ಎಂದರು.
ಮತದಾರರ ಪಟ್ಟಿಯಿಂದ ಹೆಸರು ತಪ್ಪಿಹೊಗಿದ್ದರೆ, ಇಲ್ಲವೇ ಭಾವಚಿತ್ರಗಳು ತಪ್ಪಾಗಿ ಸೇರಿದ್ದರೆ ಇಗಲೆ ಪರಿಶೀಲಿಸಿ, ಸರಿಪಡಿಸಿಕೊಳ್ಳಲು ಹಾಗೂ ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಇನ್ನೂ ಅವಕಾಶವಿದ್ದು, ಸದುಪಯೋಗ ಪಡೆದುಕೊಳ್ಳುವಂತೆ ಜನರಿಗೆ ಮನವಿ ಮಾಡಿದರು.
ಯಾದಗಿರಿ ತಾಲೂಕ ಪಂಚಾಯಿತಿ ಕರ್ಯನರ್ವಾಹಕ ಅಧಿಕಾರಿ ಬಸವರಾಜ ಶರಬೈ ಅವರು ಮಾತನಾಡಿ, ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ನರ್ಭಿತಿಯಿಂದ ಮತ ಚಲಾಯಿಸಬೇಕು. ಪ್ರಜಾಪ್ರಭುತ್ವದಲ್ಲಿ ಸಂವಿಧಾನವು ಪ್ರಜೆಗಳಿಗೆ ನೀಡಿದ ಸಂವಿಧಾನಾತ್ಮಕ ಹಕ್ಕಾಗಿದೆ. ಅಲ್ಲದೇ, ಯಾವುದೇ ಬಾಹ್ಯ ಪ್ರೇರೇಪಣೆಗಳಿಗೆ ಒಳಗಾಗದೆ ಸ್ವತಂತ್ರವಾಗಿ ತಮ್ಮ ನಾಯಕನನ್ನು ಆಯ್ದುಕೊಳ್ಳುವುದು ಪ್ರಜ್ಞಾವಂತ ಪ್ರಜೆಗಳ ರ್ತವ್ಯಆಗಿದೆ ಎಂದು ಹೇಳಿದರು.
ಈ ಸಂರ್ಭದಲ್ಲಿ ಸಹಾಯಕ ಆಯುಕ್ತರಾದ ಶಾಲಂ ಹುಸೇನ್, ಕರ್ಯನರ್ವಾಹಕ ಅಧಿಕಾರಿ ಬಸವರಾಜ ಶರಬೈ, ತಹಸೀಲ್ದಾರ ಅಣ್ಣಾರಾವ್ ಪಾಟೀಲ್, ಪೌರಾಯುಕ್ತರಾದ ಸಂಗಪ್ಪ ಉಪಾಸೆ, ತಾಲೂಕ ಪಂಚಾಯಿತಿ ಯೋಜನಾಧಿಕಾರಿ ಶಶಿಧರ ಹಿರೇಮಠ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸರ್ವಜನಿಕರು ಭಾಗವಹಿಸಿದ್ದರು.