
ಬ್ಯಾಡಗಿ,ಏ.16: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಬೇಕಾದ ಉತ್ತಮ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳಲು ಪ್ರತಿಯೊಬ್ಬರಿಗೂ ಹಕ್ಕಿದೆ. ಕಾರಣ ಎಲ್ಲರೂ ತಪ್ಪದೇ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಗ್ರಾಪಂ ಅಭಿವೃಧ್ದಿ ಅಧಿಕಾರಿ ಕೋಟೆಪ್ಪ ಪುಟ್ಟಪ್ಪನವರ ಕರೆ ನೀಡಿದರು.
ತಾಲೂಕಿನ ಸೂಡಂಬಿ ಗ್ರಾಮದ ಗೊರವಿಕಟ್ಟೆ ಕೆರೆಯ ಅಂಗಳದಲ್ಲಿ ತಾಲೂಕಾ ಸ್ವೀಪ್ ಸಮೀತಿ ಹಾಗೂ ಗ್ರಾಮ ಪಂಚಾಯತಿಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಅವರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮೌಲ್ಯವಿದ್ದು, 18 ವರ್ಷ ದಾಟಿದ ಎಲ್ಲರೂ ತಪ್ಪದೇ ಮತದಾನ ಮಾಡಿ ಎಂದು ಮನವಿ ಮಾಡಿದರು.
ನರೇಗಾ ಯೋಜನೆಯಡಿ ಕೈಗೆತ್ತಿಕೊಂಡಿರುವ ಕೆರೆ ಅಭಿವೃದ್ಧಿ ಕಾಮಗಾರಿಯ ಸ್ಥಳದಲ್ಲಿ ಮತದಾನದ ಹಾಗೃತಿಯ ಸಂದೇಶಗಳನ್ನು ರಂಗೋಲಿ ಹಾಕುವ ಪ್ರಚುರ ಪಡಿಸಲಾಯಿತು.ತಾಲೂಕಾ ನರೇಗಾ ಯೋಜನೆಯ ಸಂಯೋಜಕ ಶಾನವಾಜ್ ಚಿಣಗಿ ಮತದಾರರಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಈ ಸಂದರ್ಭದಲ್ಲಿ ಗ್ರಾಮ ಕಾಯಕ ಮಿತ್ರ, ಗ್ರಾಮ ಪಂಚಾಯತ ಸಿಬ್ಬಂದಿ, 250ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು