ತಪ್ಪದೇ ಮತದಾನ ಮಾಡಲು ಮನವಿ

ಬ್ಯಾಡಗಿ: ಚುನಾವಣಾ ಆಯೋಗವು ಸಮಾಜದ ಪ್ರತಿಯೊಂದು ವರ್ಗವು ಮತ ಚಲಾಯಿಸಬೇಕು ಎಂಬ ಗುರಿಯನ್ನು ಹೊಂದಿದ್ದು, ಎಲ್ಲರೂ ತಪ್ಪದೇ ಮತದಾನ ಮಾಡುವಂತೆ ತಾಲೂಕಾ ಸ್ವೀಪ್ ಸಮಿತಿಯ ಅಧ್ಯಕ್ಷರಾದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಮಲ್ಲಿಕಾರ್ಜುನ ಮನವಿ ಮಾಡಿದರು.
ತಾಲೂಕಾ ಸ್ವೀಪ್ ಸಮಿತಿಯ ವತಿಯಿಂದ ತಾಲೂಕಿನ ಬಿಸಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಮ್ಮನಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ನೀರು ಕಾಲುವೆ ಕಾಮಗಾರಿಯಲ್ಲಿ ಪಾಲ್ಗೊಂಡ ಕೂಲಿ ಕಾರ್ಮಿಕರನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿ ಒಬ್ಬ ಕೂಲಿ ಕಾರ್ಮಿಕರು ಮೇ 7 ರಂದು ಮತಗಟ್ಟೆಗೆ ಹೋಗಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೂಲಿ ಕಾರ್ಮಿಕರಿಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಶಿವಾನಂದ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು ಈ ಸಂದರ್ಭದಲ್ಲಿ ತಾಂತ್ರಿಕ ಸಂಯೋಜಕ ಸಂತೋಷ ನಾಯ್ಕ್. ಮಾಹಿತಿ ಸಂಯೋಜಕ ಅಕ್ಷಯ ದೇಶಪಾಂಡೆ, ತಾಂತ್ರಿಕ ಸಹಾಯಕ ಪ್ರದೀಪ. ಗ್ರಾಮ ಕಾಯಕ ಮಿತ್ರೆ ಲಲಿತ, ಬಿಎಫ್’ಟಿ ಹನುಮಗೌಡ ಹಾಗೂ ಗ್ರಾಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.