ತಪ್ಪದೇ ಮತದಾನ ಮಾಡಿ

ಬ್ಯಾಡಗಿ,ಏ22 : ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು’ ಅವರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮೌಲ್ಯವಿದ್ದು, 18 ವರ್ಷ ದಾಟಿದ ಎಲ್ಲರೂ ತಪ್ಪದೆ ಮತದಾನ ಮಾಡಿ’ ಎಂದು ನರೇಗಾ ಟಿಐಈಸಿ ಸಂಯೋಜಕ ಶಾನವಾಜ್ ಚಿಣಗಿ ಕರೆ ನೀಡಿದರು.
ತಾಲೂಕಿನ ಹಿರೇಹಳ್ಳಿ ಗ್ರಾಮದ ಹಿರೇಕೆರೆಯ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ತಾಲೂಕಾ ಸ್ವೀಪ್ ಸಮೀತಿ ಹಾಗೂ ಗ್ರಾಮ ಪಂಚಾಯತಿಯ ಸಹಯೋಗದಲ್ಲಿ ಆಯೋಜಿಸಿದ್ದ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಬೇಕಾದ ಉತ್ತಮ ವ್ಯವಸ್ಥೆಯನ್ನು ಆಯ್ಕೆ ಮಾಡಿಕೊಳ್ಳಲು ಪ್ರತಿಯೊಬ್ಬರಿಗೂ ಹಕ್ಕಿದೆ ಎಂದರಲ್ಲದೇ, ಎಲ್ಲರಿಗೂ ಮತದಾನ ಜಾಗೃತಿಯ ಕುರಿತು ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ಈ ಸಂದರ್ಭದಲ್ಲಿ ನರೇಗಾ ತಾಂತ್ರಿಕ ಸಹಾಯಕ ಎಂ.ಸಿ.ಪ್ರಕಾಶ, ಗ್ರಾಮ ಕಾಯಕ ಮಿತ್ರ ಗೀತಾ ಪೀರಣ್ಣನವರ, ಗ್ರಾಪಂ ಸಿಬ್ಬಂದಿ, ನರೇಗಾ ಯೋಜನೆಯ 260ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.