ತಪ್ಪದೇ ಮತ ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ: ವೈ.ವನಜಾ


ಸಂಜೆವಾಣಿ ವಾರ್ತೆ
ಕಾರಟಗಿ:ಏ:೦7 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಿ ಎಂದು ತಾ.ಪಂ ಸಹಾಯಕ ನಿರ್ದೇಶಕರಾದ ವೈ.ವನಜಾ ಅವರು ಹೇಳಿದರು. ತಾಲೂಕಿನ ಬೆನ್ನೂರು ಗ್ರಾಮ ಪಂಚಾಯತಿ ಕೂಲಿಕಾರರಿಗೆ ನರೇಗಾದಡಿ ಜಿನಗು ಕೆರೆ ಹೂಳೆತ್ತುವ ಕೆಲಸ ನೀಡಲಾಗಿದ್ದು, ಕಾಮಗಾರಿ ಸ್ಥಳದಲ್ಲಿ ಆಯೋಜಿಸಲಾದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಇಲ್ಲಿ ಎಲ್ಲರಿಗೂ ಮತದಾನದ ಹಕ್ಕಿದೆ. ದೇಶದ ಭವಿಷ್ಯಕ್ಕಾಗಿ ನಿಮ್ಮದೊಂದು ಮತ ಅತ್ಯಅಮೂಲ್ಯವಾದ್ದು, ದೇಶದ ಸುಭದ್ರ ಭವಿಷ್ಯಕ್ಕಾಗಿ ಪ್ರತಿಯೊಬ್ಬರ ಮತ ಅತ್ಯಮೂಲ್ಯವಾದದ್ದು, ಮತದಾರರು ಯಾವುದೇ ಆಸೆ, ಆಮೀಷಕ್ಕೆ ಒಳಗಾಗದೆ ಕಡ್ಡಾಯವಾಗಿ ಮತದಾನ ಮಾಡಿ ಎಂದರು.ನಂತರ ನರೇಗಾ ಯೋಜನೆಯಡಿ ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ‌ಖಾತ್ರಿ ಅಭಿಯಾನ ಈಗಾಗಲೇ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಪ್ರಾರಂಭವಾಗಿದ್ದು, ಗ್ರಾಮ ಪಂಚಾಯತಿಗೆ ನಮೂನೆ-6 ಬೇಡಿಕೆ ಸಲ್ಲಿಸಿ ಕೆಲಸ ಪಡೆಯಿರಿ. ನರೇಗಾ ಕೂಲಿ ಮೊತ್ತವು 316 ರಿಂದ 349 ರೂ ಹೆಚ್ಚಳವಾಗಿದೆ, ಬೇಸಿಗೆ ಇರುವುದರಿಂದ ಕೆಲಸದಲ್ಲಿ 30% ರಿಯಾಯಿತಿ ಸಹ ಇದೆ ಎಂದರು. ನೇರೇಗಾ ಕೂಲಿಕಾರರಿಗೆ ಮತದಾನದ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಈ ವೇಳೆ ತಾಲೂಕು ಪಂಚಾಯತ ತಾಂತ್ರಿಕ ಸಂಯೋಜಕ ವಿಶ್ವನಾಥ, ಐಇಸಿ ಸಂಯೋಜಕ ಸೋಮನಾಥ, ತಾಂತ್ರಿಕ ಸಹಾಯಕ ಚನ್ನಬಸವ ಗ್ರಾಮ ಪಂಚಾಯತಿ ಕಾರ್ಯದರ್ಶಿ ವಿರೇಶ್, ಸಿಬ್ಬಂದಿಗಳಾದ ಶಾಂತಪ್ಪ, ಸೋಮನಾಥ, ರೇಣುಕಾ, ಮಾರೆಪ್ಪ ಇದ್ದರು.