ತಪ್ಪದೇ ಲಸಿಕೆ ಹಾಕಿಸಿ: ಬಾಲಾಜಿರಾವ್

ಬ್ಯಾಡಗಿ, ಮೇ 29 : ಸಂಘಟಿತ ಹಾಗೂ ಅಸಂಘಟಿತ ವಲಯದ ಕಾರ್ಮಿಕರು ಕೋವಿಡ್-19 ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳ ಬಗ್ಗೆ ಮುಂಜಾಗ್ರತೆ ವಹಿಸಿ, ತಮ್ಮ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸುವ ಜೊತೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಲಭ್ಯವಿರುವ ಕೋವಿಡ್ ಲಸಿಕೆಯನ್ನು ತಪ್ಪದೇ ಹಾಕಿಸಿಕೊಳ್ಳಬೇಕೆಂದು ಕಾರ್ಮಿಕ ನಿರೀಕ್ಷಕ ಪಿ.ಜಿ.ಬಾಲಾಜಿರಾವ್ ಮನವಿ ಮಾಡಿದರು.
ಪಟ್ಟಣದಲ್ಲಿ ಶುಕ್ರವಾರದಂದು ಕಾರ್ಮಿಕ ಇಲಾಖೆಯ ವತಿಯಿಂದ ಸಂಘಟಿತ ಹಾಗೂ ಅಸಂಘಟಿತ ವಲಯದ ಕಾರ್ಮಿಕರಿಗೆ ಎರಡನೇ ಹಂತದ ಕೋವಿಡ್-19 ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪಟ್ಟಣದ ಮುಖ್ಯರಸ್ತೆ ಸೇರಿದಂತೆ ವಿವಿಧ ಕಡೆಗಳಲ್ಲಿ ತೆರಳಿ ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಿಗೆ ಕೆಲಸದ ಸಂದರ್ಭದಲ್ಲಿ ಮಾಸ್ಕ್ ಧರಿಸಿಕೊಂಡು ಸಾಮಾಜಿಕ ಅಂತರವಿರಬೇಕೆಂದು ಹಾಗೂ ಸ್ಯಾನಿಟೈಸರ್ ಬಳಸಬೇಕು ಎಂದು ತಿಳಿಸಿದರಲ್ಲದೆ ಪ್ರತಿಯೊಬ್ಬ ಕಾರ್ಮಿಕರು ತಪ್ಪದೇ ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ಸಮೀಪದ ಆರೋಗ್ಯ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಂಡು ಪಡೆಯಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಿಇಓ ಯೋಗೀಶ್ ಮಡ್ದಿ, ಕಾರ್ಮಿಕ ಬಂಧು ಮಂಜುನಾಥ ಪೂಜಾರ, ರವಿಚಂದ್ರ ಮೇಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.