ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಬೆಲ್ದಾಳೆ ಆಗ್ರಹ

ಬೀದರ್: ಮೇ.31:ಜಿಎನ್ ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೈ ಶ್ರೀರಾಮ ಹಾಡು ಹಾಕಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿಗಳು ಗಲಾಟೆ ಮಾಡಿ ದಾಂಧಲೆ, ಹಲ್ಲೆ ನಡೆಸಿರುವುದು ಖಂಡನೀಯ. ಜಿಲ್ಲಾಡಳಿತ, ಪೆÇಲೀಸ್ ಇಲಾಖೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಯಾರದೋ ಒತ್ತಡಕ್ಕೆ ಒಳಗಾಗಿ, ತುಷ್ಠೀಕರಣ ರಾಜಕಾರಣದಲ್ಲಿ ತೊಡಗಿ ವಿನಾಕಾರಣ ಹಲ್ಲೆಗೊಳಗಾದ ಹಿಂದು ವಿದ್ಯಾರ್ಥಿಗಳ ಮೇಲೆ ಹಾಕಿರುವ ಪ್ರಕರಣ ಕೂಡಲೇ ವಾಪಸ್ ಪಡೆಯಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಕರೆ ನೀಡಿದರು.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೆÇೀಲಿಸ್ ವರಿಷ್ಟಾಧಿಕಾರಿಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೇ ತಪ್ಪಿತಸ್ತರ ವಿರೂದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕು. ಬಸವಣ್ಣನ ಕರ್ಮಭೂಮಿಯಲ್ಲಿ ಗಲಭೆಗೆ ಪ್ರಚೋದನೆ ನೀಡುವವರ ಹೆಡೆಮುರಿ ಕಟ್ಡಿ. ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿರುತ್ತದೆ. ಇಲ್ಲಿಯ ಉಭಯ ಸಚಿವರುಗಳಿಗೆ ಸಮಾಧಾನಪಡಿಸಲು ಅಮಾಯಕರ ಬಲಿಪಶು ಮಾಡಬೇಡಿ ಎಂದು ಹೇಳಿದರು.
ಭಾರತದಲ್ಲಿ ಜೈ ಶ್ರೀರಾಮ ಎಂಬ ಹಾಡು ಹಾಕದೇ ಎನು ಪಾಕಿಸ್ತಾನ ಅಥವಾ ಇನ್ಯಾವುದೊ ಮುಸ್ಲಿಮ್ ರಾಷ್ಟ್ರಗಳಲ್ಲಿ ಹಾಕಬೇಕೊ ಒಂದು ಗೊತ್ತಾಗುತ್ತಿಲ್ಲ. ಈ ಸರ್ಕಾರಕ್ಕೆ ಹಿಂದುಗಳ ಮೇಲೆ ಇಷ್ಟೇಕೆ ಸಿಟ್ಡಿದೆ? ಎಂದು ಆಕ್ರೋಶ ಹೊರ ಹಾಕಿರುವ ಬೆಲ್ದಾಳೆ ಅವರು, ಕೂಡಲೇ ಹಿಂದು ವಿದ್ಯಾರ್ಥಿಗಳ ಮೇಲೆ ಹಾಕಿದ ಪ್ರಕರಣ ಹಿಂಪಡೆದು ಹಲ್ಲೆ ಎಸಗಿದವರನ್ನು ಕೂಡಲೇ ಬಂಧಿಸಬೇಕು ಇಲ್ಲದಿದ್ದರೆ ಪಕ್ಷದಿಂದ ಉಗ್ರ ಹೋರಾಟ ನಡೆಸಲಾಗುವುದೆಂದು ಬೆಲ್ದಾಳೆ ಪ್ರಕಟಣೆ ಮೂಲಕ ಎಚ್ಚರಿಸಿದರು.