ತಮಿಳುನಾಡಿಗೆ ನೀರು ಬಿಡುಗಡೆ: ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಆ.21:- ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಖಾಲಿ ಕೊಡ ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಆವರಣದಲ್ಲಿ ಕರ್ನಾಟಕ ಸೇನಾ ಪಡೆಯಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಖಾಲಿ ಕೊಡ ಹಿಡಿದುಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆತಡೆ ನಡೆಸಿ, ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರಗಳ ವಿರುದ್ದಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿಚಾ.ರಂ.ಶ್ರೀನಿವಾಸಗೌಡ ಮಾತನಾಡಿ,ಕರ್ನಾಟಕ ಸರ್ಕಾರ ತಮಿಳುನಾಡು ಸರ್ಕಾರದಒತ್ತಡಕ್ಕೆ ಮಣಿದುಕೆಆರ್‍ಎಸ್, ಕಬಿನಿ ಜಲಾಶಯಗಳಿಂದ ಪ್ರತಿ ದಿನ 10 ಸಾವಿರಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುತ್ತಿರುವುದು ಖಂಡನೀಯವಾಗಿದೆ. ಇದೇರೀತಿ ಪ್ರತಿ ದಿನ ನೀರನ್ನು ಬಿಡುಗಡೆ ಮಾಡುತ್ತಿದ್ದರೆ ಜಲಾಶಯಗಳು ಸಂಪೂರ್ಣ ಖಾಲಿಯಾಗಿ ರಾಜ್ಯಜನತೆಗೆ ಕುಡಿಯುವ ನೀರಿಗೆತೊಂದರೆಉಂಟಾಗಲಿದೆ. ಕೇಂದ್ರ ಸರ್ಕಾರತಕ್ಷಣವೇ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದಶಾ.ಮುರಳಿ, ಚಾ.ವೆಂ.ರಾಜ್‍ಗೋಪಾಲ್, ಪಣ್ಯದ ಹುಂಡಿರಾಜು, ನಿಜಧ್ವನಿ ಗೋವಿಂದರಾಜು, ಗು.ಪುರುμÉೂೀತ್ತಮ, ಮಹದೇವ ನಾಯಕ, ವೀರಭದ್ರ, ತಾಂಡವಮೂರ್ತಿ, ಸೋಮವಾರಪೇಟೆ ಮಂಜುಇತರರು ಭಾಗವಹಿಸಿದ್ದರು.