ತಮಿಳು ಚಿತ್ರ ನಿರ್ಮಾಪಕರಿಗೆ ಐಟಿ ಶಾಕ್

ಚೆನ್ನೈ,ಆ.೨- ತಮಿಳು ಚಲನಚಿತ್ರೋದ್ಯಮದ ಪ್ರಮುಖರ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ೪೫ ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ.
ತಮಿಳು ಚಿತ್ರರಂಗದ ಪ್ರಮುಖ ೧೦ ನಿರ್ಮಾಪಕರು ಮತ್ತು ವಿತರಕ ಕಛೇರಿ ನಿವಾಸಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿರುವುದು ತಮಿಳು ಚಿತ್ರರಂಗವನ್ನು ಬೆಚ್ಚಿ ಬೀಳಿಸಿದೆ.
ನಿರ್ಮಾಪಕರಾದ ಕಲೈಪುಲಿ ಸೇರಿದಂತೆ ವಿತರಕರಾದ ಥಾನು, ಎಸ್‌ಆರ್ ಪ್ರಭು, ಅನ್ಬು ಚೆಜಿಯಾನ್ ಮತ್ತು ಜ್ಞಾನವೇಲ್ ಕಿಂಗ್ ಸೇರಿದಂತೆ ಹಲವರ ನಿವಾಸದ ಮೇಲೆ ಬೆಳಗ್ಗೆ ೬ ಗಂಟೆಯಿಂದ ಆದಾಯ ತೆರಿಗೆ ಇಲಾಖೆಯ ಹಲವು ಅಧಿಕಾರಿಗಳ ತಂಡ ಈ ದಾಳಿ ನಡೆದಿದೆ.
ಕೆಲವು ತಮಿಳು ಚಲನಚಿತ್ರ ನಿರ್ಮಾಪಕರು ಮತ್ತು ವಿತರಕರು ತೆರಿಗೆ ವಂಚನೆ ಮಾಡಿದ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆ ತಮಿಳುನಾಡಿನಾದ್ಯಂತ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಲೈಪುಲಿ ಥಾನು, ಎಸ್‌ಆರ್ ಪ್ರಭು, ಅನ್ಬು ಚೆಜಿಯನ್ ಮತ್ತು ಜ್ಞಾನವೇಲ್ ರಾಜಾ ಸೇರಿದಂತೆ ಸುಮಾರು ೧೦ ತಮಿಳು ಚಲನಚಿತ್ರ ನಿರ್ಮಾಪಕರು ಮತ್ತು ವಿತರಕರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ ೬ ಗಂಟೆ ಸುಮಾರಿಗೆ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸಿದ್ದು ಮುಂದುವರಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.