ತಮ್ಮ ಕುಟುಂಬದೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಿಮತ ಚಲಾಯಿಸಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್

ಯಾದಗಿರಿ : ಮೇ 10 : ಯಾದಗಿರಿ ಜಿಲ್ಲೆಯ ಚುನಾವಣೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಸ್ನೇಹಲ್ .ಆರ್ ಅವರು ತಮ್ಮ ಕುಟುಂಬದೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು.
ಯಾದಗಿರಿ ನಗರದ ಸ್ಟೇಷನ್ ರೋಡ್‍ನಲ್ಲಿ ಸ್ಥಾಪಿಲಾಗಿರುವ 73ರ ಸಂಖ್ಯೆಯ ಮತಗಟ್ಟೆಗೆ ತೆರಳಿ ಮತ ಚಲಾಯಿಸಿ ಮಾತನಾಡಿ, ಎಲ್ಲರೂ ಮತ ಚಲಾಯಿಸಬೇಕು. ಅದು ನಮ್ಮ ಹಕ್ಕು ಹಾಗೂ ಜವಬ್ದಾರಿಯಾಗಿದೆ ಎಂದರು. ಎಲ್ಲಾ ಮತದಾರರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ನುಡಿದರು.