ತರಗತಿ ನಡೆಸುತ್ತಿದ್ದ ಕಾಲೇಜುಗಳಿಗೆ ಆಯುಕ್ತರ ಎಚ್ಚರಿಕೆ

ದಾವಣಗೆರೆ.ಏ.೨೨; ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಕಾರಣದಿಂದಾಗಿ ಶಾಲಾ ಕಾಲೇಜುಗಳನ್ನು ಬಂದ್ ಮಾಡುವಂತೆ ಆದೇಶಿಸಲಾಗಿದೆ. ಆದರೆ, ದಾವಣಗೆರೆ ನಗರದ ವಿವಿಧ ಕಾಲೇಜುಗಳಲ್ಲಿ ತರಗತಿ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಗುರುವಾರ ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್ ಮುದ್ದಜ್ಜಿ ಆಂಜನೇಯ ಬಡಾವಣೆಯಲ್ಲಿರುವ ಶ್ರೀ ಸಿದ್ದೇಶ್ವರ ಪಿಯು ಕಾಲೇಜಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ತರಗತಿಗಳನ್ನು ಯಾವುದೇ ಕಾರಣಕ್ಕೂ ನಡೆಸಬಾರದು. ಒಂದು ವೇಳೆ ತರಗತಿಗಳನ್ನು ನಡೆಸುತ್ತಿರುವುದು ಕಂಡು ಬಂದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು.