ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿ ಕೊಂದ ಪತಿ ನೇಣಿಗೆ ಶರಣಾದ

ರಾಯಚೂರು,ಸೆ.23- ಜಿಲ್ಲೆಯ ಮಾನ್ವಿ ತಾಲೂಕಿನ ರಾಜೋಳ್ಳಿ ಗ್ರಾಮದಲ್ಲಿ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣಾದ ಘಟನೆ ನಡೆದಿದೆ.
ಅಂಬಮ್ಮ (30) ಕೊಲೆಯಾದ ಗೃಹಿಣಿ, ಮಲಗಿದ್ದ ವೇಳೆ ಪತ್ನಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತಿ ಖಾಸಿಮಪ್ಪ (35) ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ ಅಡವಿ ಖಾನಾಪುರ ಜಮೀನಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಖಾಸಿಮಪ್ಪನ ಶವ ಪತ್ತೆಯಾಗಿದೆ. ಮದ್ಯವ್ಯಸನಿಯಾಗಿದ್ದ ಖಾಸಿಮಪ್ಪ ನಿತ್ಯ ಪತ್ನಿ ಜೊತೆ ಜಗಳ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಗಂಡ ಹೆಂಡತಿ ನಡುವೆ ಜಗಳದಲ್ಲಿ ಇಬ್ಬರು ಮೃತದಿಂದ ಇಬ್ಬರು ಮಕ್ಕಳು ಅನಾತವಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಶವವನ್ನು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. , ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಆರ್. ಭೇಟಿ ನೀಡಿ ಪರಿಶೀಲಿಸಿದ್ದಾರೆ.ಮಾನ್ವಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.