ತಲೈವಿಗೆ ಕೊರೊನಾ ಕಾಟ: ಮುಂದಕ್ಕೆ

ಚೆನ್ನೈ ಏ 10, ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ಜಯಲಲಿತಾ ಅವರ ಜೀವನ ಆಧಾರಿತ ಚಿತ್ರ “ತಲೈವಿಗೆ ಕೊರೋನಾ ಸೋಂಕಿನ ಕಾಟ ಎದುರಾಗಿದೆ.

ತಮಿಳುನಾಡಿನಲ್ಲಿ ಕೊರೊನಾ ಸೋಂಕು ಸಂಖ್ಯೆ ನಿತ್ಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರ “ಬಿಡುಗಡೆಯ ದಿನಾಂಕ ಮುಂದೂಡಲಾಗಿದೆ.

ತಮಿಳುನಾಡಿನ ಮುಖ್ಯಮಂತ್ರಿ ಆಗಿದ್ದ ದಿ. ಜಯಲಲಿತಾ ಜೀವನಚರಿತ್ರೆಯನ್ನಾಧರಿಸಿದ ಚಿತ್ರದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ನಟಿಸಿದ್ದು, ಪೋಸ್ಟರ್, ಫಸ್ಟ್ ಲುಕ್ ಗಳಿಂದಲೇ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಕೊರೊನಾ ಪ್ರಕರಣಗಳು ಹೆಚ್ಚಳ ಹಿನ್ನಲೆ ಹಾಗೂ ಲಾಕ್ ಡೌನ್ ಕಾರಣದಿಂದ ಚಿತ್ರದ ಬಿಡುಗಡೆಯ ದಿನವನ್ನು ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಂದಹಾಗೆ ಈ ಚಿತ್ರವನ್ನು ಏಪ್ರಿಲ್ 23ರಂದು ದೇಶದಾದ್ಯಂತ ಎಲ್ಲಾ ಭಾಷೆಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.