ತಳ್ಳುವ ಗಾಡಿಯಲ್ಲಿ ತರಕಾರಿ ಮಾರಾಟಕ್ಕೆ ಅವಕಾಶ

ದಾವಣಗೆರೆ,ಏ.29: ಕೊರೊನಾ ನಿಯಂತ್ರಣ ಕ್ರಮವಾಗಿ ಸರ್ಕಾರ ವಿಧಿಸಿರುವ ಜನತಾ ಕರ್ಫ್ಯೂ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಮಹಾನಗರ ಪಾಲಿಕೆ ಕಾಯಿಪಲ್ಯೆ, ಸೊಪ್ಪು ಮತ್ತು ಹಣ್ಣುಗಳ ಮಾರಾಟಕ್ಕೆ ತಳ್ಳುವ ಗಾಡಿ ವ್ಯವಸ್ಥೆ ಮಾಡಿ ಜನರ ಮನೆ ಬಾಗಿಲಿಗೆ ತಲುಪಿಸುತ್ತಿದೆ.ಜನತಾ ಕರ್ಫ್ಯೂ ವೇಳೆ ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ 10 ಗಂಟೆಯ ವರೆಗೆ ಅವಕಾಶ ಕಲ್ಪಿಸಲಾಗಿದೆ. ಇದರ ಮಧ್ಯೆಯೂ ಜನರು ತರಕಾರಿಯು ಸಿಗದಂತೆ ಅಲೆಯಬಾರದೆಂಬ ಕಾರಣಕ್ಕೆ ಪಾಲಿಕೆ ನಗರದಲ್ಲಿ 165 ತಳ್ಳುವ ಗಾಡಿಯ ಮೂಲಕ ತರಕಾರಿ, ಹಣ್ಣು, ಸೊಪ್ಪುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಿದೆ.
ಹೀಗಾಗಿ ನಗರದ ಬಹುತೇಕ ಕಡೆಗಳಲ್ಲಿ ಗುರುವಾರ ತಳ್ಳುವ ಗಾಡಿ ವ್ಯಾಪಾರಿಗಳು ತರಕಾರಿ, ಸೊಪ್ಪು ಮತ್ತು ಹಣ್ಣು ಮಾರಾಟ ಮಾಡುತ್ತಿರುವುದು ಕಂಡು ಬಂತು.