ತಹಶೀಲ್ದಾರ್ ಕಚೇರಿಗೆ ಬೈರೇಗೌಡ ಭೇಟಿ

(ಸಂಜೆವಾಣಿ ಪ್ರತಿನಿಧಿಯಿಂದ)
ಹುಬ್ಬಳ್ಳಿ,ಸೆ೧೪: ರಾಜ್ಯ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಹುಬ್ಬಳ್ಳಿ ತಹಶಿಲ್ದಾರ ಕಚೇರಿಗೆ ದಿಢೀರ್ ಭೇಟಿ ನೀಡಿ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು.

ತಹಶಿಲ್ದಾರ ಕಚೇರಿಯಲ್ಲಿ ಅವರು ನಾಗರಿಕ ಮಿತ್ರ ಕೇಂದ್ರ, ಗ್ರಾಮ ಲೆಕ್ಕಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿ, ಹುಬ್ಬಳ್ಳಿ ತಾಲೂಕು ಹಾಗೂ ಗ್ರಾಮೀಣ ಭಾಗದ ಜನರ ದೂರುಗಳು ಹಾಗೂ ಅದಕ್ಕೆ ಸ್ಪಂದಿಸಿದ ವರದಿಗಳ ಕುರಿತು ಪರಿಶೀಲನೆ ನಡೆಸಿದರು.

ಈ ವೇಳೆ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದ ಅವರು, ನಾಗರಿಕ ಮಿತ್ರ ಕೇಂದ್ರಕ್ಕೆ ಬರುವ ಜನರಿಗೆ ತೊಂದರೆಯಾಗದಂತೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಇದಕ್ಕೂ ಪೂರ್ವದಲ್ಲಿ ಕಲಘಟಗಿ ತಾಲೂಕಿನ ದುಮ್ಮವಾಡ ನಾಡ ಕಚೇರಿಗೆ ಭೇಟಿ ನೀಡಿದ ಸಚಿವರು ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕಾರ್ಯವನ್ನು ಸಹ ಪರಿಶೀಲಿಸಿದರು.