
ಬೆಂಗಳೂರು.ಮೇ೨-ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಸಂದರ್ಭ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ,ತಾಕತ್ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ ಕಿಡಿಕಾರಿದ್ದಾರೆ.
ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿತು. ಈ ಸಂದರ್ಭ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಈಗಾಗಲೇ ಕೇಂದ್ರ ಸರ್ಕಾರ ಪಿಎಫ್‌ಐ ನಿಷೇಧ ಮಾಡಿದೆ. ಇವತ್ತು ಕಾಂಗ್ರೆಸ್‌ನವರು ಪಿಎಫ್‌ಐ ನಿಷೇಧ ಮಾಡ್ತೀವಿ. ಜತೆಗೆ ಭಜರಂಗದಳ ನಿಷೇಧ ಮಾಡ್ತೀವಿ ಎಂದಿದ್ದಾರೆ.
ಕಾಂಗ್ರೆಸ್‌ನವರ ಟಾರ್ಗೆಟ್ ಇರೋದು ಪಿಎಫ್‌ಐ ಅಲ್ಲ, ಅವರ ಟಾರ್ಗೆಟ್ ಭಜರಂಗದಳ.ಆರ್‌ಎಸ್‌ಎಸ್‌ನ ಒಂದು ಭಾಗ ಬಿಜೆಪಿ. ಆರ್‌ಎಸ್‌ಎಸ್‌ನ ಯುವಕರ ದಳ ಭಜರಂಗದಳ. ಇವತ್ತು ಭಜರಂಗದಳ ಮತ್ತು ಪಿಎಫ್‌ಐ ಎರಡನ್ನೂ ಒಂದೇ ತಕ್ಕಡಿಯಲ್ಲಿಟ್ಟಿದೆ ಕಾಂಗ್ರೆಸ್. ದೇಶದ್ರೋಹಿ ಪಿಎಫ್‌ಐ ಜತೆ ದೇಶಪ್ರೇಮಿ ಭಜರಂಗದಳ ಹೋಲಿಸಿರೋದು ಸರಿಯಲ್ಲ. ನಿಮಗೆ ತಾಕತ್ ಇದ್ದರೆ ಭಜರಂಗದಳ ನಿಷೇಧ ಮಾಡಿ ನೋಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವಿಚಾರ ಇದೀಗ ಭಾರಿ ಚರ್ಚೆಗೆ ಗ್ರಾಸವಾಗುತ್ತಿದ್ದು ವಿವಾದಾತ್ಮಕ ಕಿಡಿ ಹಚ್ಚಿದವರ ವಿರುದ್ಧ ಕೇಸ್ ಬೀಳುತ್ತಾ ಅನ್ನೋದನ್ನು ಕಾದು ನೋಡಬೇಕಾಗಿದೆ.