ತಾಜ ಸುಲ್ತಾನಪುರದಲ್ಲಿ ಶ್ರಾವಣ ಮಾಸದ ಭಜನಾ ಕಾರ್ಯಕ್ರಮ ಸಂಪನ್ನ

ಕಲಬುರಗಿ,ಸೆ.16-ತಾಜ ಸುಲ್ತಾನಪುರದ ಚಿನ್ನದಕಂತಿ ಚಿಕ್ಕವೀರೇಶ್ವರ ಸಂಸ್ಥಾನ ಹಿರೇಮಠದಲ್ಲಿ ಶ್ರಾವಣ ಮಾಸದ ನಿಮಿತ್ಯ ಮಠದ ಪೀಠಾಧಿಪತಿಗಳಾದ ಡಾ.ರೇವಣಸಿದ್ಧ ಶಿವಾಚಾರ್ಯರ ನೇತೃತ್ವದಲ್ಲಿ ರುದ್ರಾಭಿಷೇಕ, ಜಂಗಮ ಗಣಾರಾಧನೆ ಮತ್ತು ಭಜನಾ ಕಾರ್ಯಕ್ರಮವು ಪ್ರಸಾದ ಸೇವೆಯೊಂದಿಗೆ ಸಂಪನ್ನಗೊಂಡಿತು.
ಇದೇ ಸಂದರ್ಭದಲ್ಲಿ ಪೂಜ್ಯರು ಭಕ್ತರಿಗೆ ಆಶೀರ್ವಚನ ನೀಡಿದರು ಎಂದು ತಾಜ ಸುಲ್ತಾನಪುರ ಚಿನ್ನದಕಂತಿ ಚಿಕ್ಕವೀರೇಶ್ವರ ಸಂಸ್ಥಾನ ಹಿರೇಮಠದ ಸಮಸ್ತ ಸದ್ಭಕ್ತರು ಮತ್ತು ವಿಶ್ವರಾಧ್ಯ ಸೇವಾ ಸಮಿತಿ ಸಂಘಟನಾ ಕಾರ್ಯದರ್ಶಿ ಬಸವರಾಜ ಶೀಲವಂತ ಅಂಬಲಗಿ ತಿಳಿಸಿದ್ದಾರೆ.