ತಾಯಂದಿರ ಸಭೆ ಶಿಕ್ಷಣ ಮತ್ತು ಕಲಿಕಾ ಪ್ರಕ್ರಿಯೆಯನ್ನು ಉತ್ತೇಜಿಸಿ

ಇಂಡಿ:ಜು.16: ಶಾಲೆಗೆ ಹೋಗುವ ಮಕ್ಕಳಲ್ಲಿ ಅಪೌಷ್ಟಿಕತೆಯ ಮಟ್ಟವನ್ನು ಕಡಿಮೆ ಮಾಡುವುದು. ಶಿಕ್ಷಣ ಮತ್ತು ಕಲಿಕೆಯ ಪ್ರಕ್ರಿಯೆಯನ್ನು ಉತ್ತೇಜಿಸಿ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ ಎಂದು ಬಿ ಆರ್ ಪಿ ಅಧಿಕಾರಿ ಆರ್ ವಿ ಪಾಟೀಲ ಹೇಳಿದರು.
ಅವರು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ,ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ಮತ್ತು ಅಕ್ಷರ ದಾಸೋಹ ಇಲಾಖೆ ಇಂಡಿ ಅವರ ವತಿಯಿಂದ ಹಮ್ಮಿಕೊಂಡ ಪ್ರಧಾನ ಮಂತ್ರಿ ಪೆÇೀಷಣ್ ಶಕ್ತಿ ನಿರ್ಮಾಣ ಯೋಜನೆ ಅಡಿಯಲ್ಲಿ ತಾಯಂದಿರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಪೆÇೀಷಣ್ ಅಭಿಯಾನವು ಹದಿಹರೆಯದವರು, ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರ ಪೌಷ್ಟಿಕಾಂಶದ ಫಲಿತಾಂಶಗಳನ್ನು ಸುಧಾರಿಸಲು ಸಹಕಾರಿಯಾಗಿದೆ ಎಂದು ಹೇಳಿದರು.
ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಮಕ್ಕಳ ಬೆಳವಣಿಗೆಯಲ್ಲಿ ಪೌಷ್ಟಿಕಾಂಶಯುಕ್ತ ಆಹಾರ,ಗುಣಮಟ್ಟದ ಶಿಕ್ಷಣ ಬಹುಮುಖ್ಯವಾಗಿವೆ. ಹಸಿವು ಮತ್ತು ಅಪೌಷ್ಟಿಕತೆಯನ್ನು ನಿವಾರಿಸಿ, ಶಾಲೆಗೆ ದಾಖಲಾತಿ ಮತ್ತು ಹಾಜರಾತಿಯನ್ನು ಹೆಚ್ಚಿಸಿ, ಜಾತಿಗಳ ನಡುವೆ ಸಾಮಾಜಿಕತೆಯನ್ನು ಸುಧಾರಿಸಿ, ತಳಮಟ್ಟದಲ್ಲಿ ವಿಶೇಷವಾಗಿ ಮಹಿಳೆಯರಿಗೆ ಉದ್ಯೋಗವನ್ನು ಒದಗಿಸಲು ಈ ಯೋಜನೆ ಫಲಕಾರಿಯಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಅಡುಗೆ ಸಿಬ್ಬಂದಿಯವರ ವೈಯಕ್ತಿಕ ಸ್ವಚ್ಛತೆ, ದಾಸ್ತಾನುಗಳ ಕೋಣೆ ಮತ್ತು ಆಹಾರ ಸಾಮಗ್ರಿಗಳ ಪರಿಶೀಲನೆ ನಡೆಸಲಾಯಿತು.
ಶಾಲಾ ಮುಖ್ಯ ಶಿಕ್ಷಕ ಎ ಎಂ ಬೆದ್ರೇಕರ ಅಧ್ಯಕ್ಷತೆ ವಹಿಸಿದ್ದರು. ಎಸ್ ಡಿ ಎಂ ಸಿ ಪದಾಧಿಕಾರಿಗಳಾದ ನಿಸಾರ್ ಅಹಮದ್ ಬಾಗವಾನ, ಪೈಗಂಬರ್ ನದಾಫ್,ಶಿಕ್ಷಕರಾದ ಎಸ್ ಎಸ್ ಅರಬ, ಎಸ್ ಪಿ ಪೂಜಾರಿ ಸೇರಿದಂತೆ ತಾಯಂದಿರು, ಪಾಲಕರು ಉಪಸ್ಥಿತರಿದ್ದರು.