ತಾಯಿ ಚಿತಾಭಸ್ಮ ವಿಸರ್ಜನೆಗೆ ತೆರಳಿದ್ದ ಮಗ ನೀರುಪಾಲು


ಸಂಜೆವಾಣಿ ವಾರ್ತೆ
ಹೂವಿನಹಡಗಲಿ, ಜು.21: ಮೂರು ದಿನಗಳ ಹಿಂದೆ ನಿಧನರಾಗಿದ್ದ ತನ್ನ ತಾಯಿಯ ಚಿತಾಭಸ್ಮವನ್ನು ನೀರಿಗೆ ಬಿಡಲು ತೆರಳಿದ್ದ ಮಗ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಇಟ್ಟಿಗಿ ಗ್ರಾಮದಲ್ಲಿ ಜರುಗಿದೆ.
ಇಟ್ಟಿಗಿ ಗ್ರಾಮದ ಹೆಚ್.ಜಿ.ಕೊಟ್ರೇಶ್ (40) ಮೃತರು. ತನ್ನ ತಾಯಿಯ ಚಿತಾಭಸ್ಮವನ್ನು ವಿಸರ್ಜಿಸಲು ಹಗರಿಬೊಮ್ಮನಹಳ್ಳಿ ರಸ್ತೆಯ ಚೆಕ್ ಡ್ಯಾಂಗೆ ತೆರಳಿದ್ದಾಗ ಕಾಲುಜಾರಿ ಬಿದ್ದು ನೀರಲ್ಲಿ ಮುಳುಗಿದ್ದಾರೆ. ಮಧ್ಯಾಹ್ನ ಸಾಂಪ್ರದಾಯಿಕ ಪೂಜೆ ನೆರವೇರಿಸಿ ಚಿತಾಭಸ್ಮದೊಂದಿಗೆ ತೆರಳಿದ್ದ ಕೊಟ್ರೇಶ ವಾಪಾಸ್ ಮನೆಗೆ ಬಂದಿರಲಿಲ್ಲ. ಕುಟುಂಬದ ಸದಸ್ಯರು ರಾತ್ರಿಯವರೆಗೂ ಹುಡುಕಾಟ ನಡೆಸಿದರೂ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಗುರುವಾರ ಬೆಳಿಗ್ಗೆ ಗ್ರಾಮದ ಹೊರ ವಲಯದಲ್ಲಿರುವ ಚೆಕ್ ಡ್ಯಾಂ ಬಳಿ ಕೊಟ್ರೇಶನ ಬೈಕ್, ಚಪ್ಪಲಿಗಳು ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಅಗ್ನಿಶಾಮಕ ದಳ ಸಿಬ್ಬಂದಿಯನ್ನು ಕರೆಯಿಸಿ ಚೆಕ್ ಡ್ಯಾಂ ನಲ್ಲಿ ಹುಡುಕಾಟ ನಡೆಸಿದಾಗ ಶವ ಪತ್ತೆಯಾಯಿತು. ಇಟ್ಟಿಗಿ ಠಾಣೆಯ ಪಿಎಸ್‍ಐ ವೀರೇಶ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಕುರಿತು ಇಟ್ಟಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

One attachment • Scanned by Gmail