
ಹರಿಹರ ಫೆ 27: ತಾಯಿ- ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡಬೇಕೆಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರವು ತಾಯಿ ಮಕ್ಕಳ ಆಸ್ಪತ್ರೆಗೆ ರಾಜ ಜಿಲ್ಲೆ ತಾಲೂಕುಗಳಿಗೆ ಅನುದಾನವನ್ನು ಬಿಡುಗಡೆ ಮಾಡಿದೆ ಎಂದು ಸಂಸದ ಜಿಎಂ ಡಾ. ಸಿದ್ದೇಶ್ವರ ಹೇಳಿದರತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ವಿಭಾಗ ಇವರ ವತಿಯಿಂದ 50 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನಾ ಸಮಾರಂಭದ ಕಾರ್ಯಕ್ರಮದಲ್ಲಿ ಉದ್ಘಾಟನೆಯ ನೆರವೇರಿಸಿ ಮಾತನಾಡಿದವರು ತಾಯಿ ಮತ್ತು ಮಕ್ಕಳ ಮರಣ ಪ್ರಮಾಣವನ್ನು ತಗ್ಗಿಸಲು ರಾಜ್ಯದಲ್ಲಿ ಪ್ರಸ್ತುತ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿವೆ. ಅದರಂತೆ ಹರಿಹರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಅತಿ ಹೆಚ್ಚು ಅವಶ್ಯಕವಾಗಿ ತಾಯಿ ಮಕ್ಕಳ ಆಸ್ಪತ್ರೆ ಅದರ ಕಟ್ಟಡ ಶಂಕುಸ್ಥಾಪನೆ ನೆರವೇರಿಸಿದ್ದೇವೆ 20 ಕೋಟಿ ವೆಚ್ಚದಲ್ಲಿ ಆಸ್ಪತ್ರೆಯು ಒಂದು ವರ್ಷದಲ್ಲಿ ನಿರ್ಮಾಣವಾಗಿ ಸಾರ್ವಜನಿಕರಿಗೆ ಲೋಕಾರ್ಪಣೆ ಆಗುತ್ತದೆ ಎಂದರು.ಶಾಸಕ ಎಸ್ ರಾಮಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದವರು ನಾವು ಹಿಂದೆ ನರ್ಸಿಂಗ್ ಮತ್ತು ಮೆಡಿಕಲ್ ಕಾಲೇಜ್ ತರಬೇಕೆಂಬ ಉದ್ದೇಶದಿಂದ ಸಾಕಷ್ಟು ಸಂಘ ಸಂಸ್ಥೆ ಹೋರಾಟಕ್ಕೆ ನಮ್ಮ ಬೆಂಬಲ ನೀಡಿ ಮತ್ತು ಸರ್ಕಾರದ ಸಂಬಂಧ ಪಟ್ಟ ಸಚಿವರಿಗೆ ಮನವಿಯನ್ನು ಸಲ್ಲಿಸಿದ್ದೇವೆ ಸದ್ಯಕ್ಕೆ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡಕ್ಕೆ ಅನುದಾನ ಬಿಡುಗಡೆಗೊಂಡಿದೆ ಅತಿ ಶೀಘ್ರದಲ್ಲೇ ಕಟ್ಟಡ ಪೂರ್ಣಗೊಂಡು ಸಾರ್ವಜನಿಕರಿಗೆ ಉಪಯೋಗವಾಗುತ್ತದೆ ಎಂದರುವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದದ್ದು, ಸಾರ್ವಜನಿಕರಿಂದ ದೂರುಗಳು ಬರದಂತೆ ಪ್ರೀತಿ, ವಿಶ್ವಾಸದಿಂದ ಸೇವೆಗೈಯುವಂತೆ ಕರೆ ನೀಡಿದರು. ಸರಕಾರಿ ಆಸ್ಪತ್ರೆಯ ಸಿಬ್ಬಂದಿಯಿಂದ ಹಿಡಿದು ವೈದ್ಯರು, ಅಧಿಕಾರಿಗಳು ಹಸನ್ಮುಖಿಗಳಾಗಿ ಸೇವೆ ಸಲ್ಲಿಸಬೇಕು. ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡವು ಕಳಪೆ ಆಗದಂತೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಬೇಕೆಂದು ಗುತ್ತಿಗೆದಾರರಿಗೆ ತಾಕಿತ್ತು ಮಾಡಿದರು ಅದರಂತೆ ಇಲ್ಲಿನ ಆಡಳಿತ ವೈದ್ಯಧಿಕಾರಿ ವೈದ್ಯರುಗಳು ಸಾರ್ವಜನಿಕರು ಆಸ್ಪತ್ರೆಯ ಕಟಡದ ಬಗ್ಗೆ ಗಮನ ವಹಿಸಬೇಕೆಂದು ಹೇಳಿದರಮಾಜಿ ಶಾಸಕ ಬಿ ಪಿ ಹರೀಶ್. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೀರೇಶ್ ಹನಗವಾಡಿ. ನಗರಸಭಾ ಅಧ್ಯಕ್ಷ ಶಹೀನಾ ಭಾನು ದಾದಾಪೀರ್. ಸದಸ್ಯ ಅಶ್ವಿನಿ ಕೃಷ್ಣ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ನಾಗರಾಜ್. ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಡಳಿತ ಮುಖ್ಯ ವೈದ್ಯ ಅಧಿಕಾರಿ ಡಿಎಂ ಚಂದ್ರಮೋಹನ್. ಆಸ್ಪತ್ರೆಯ ಆಡಳಿತ ಮುಖ್ಯ ವೈದ್ಯಾಧಿಕಾರಿ ಎಲ್ ಹನುಮನಾಯ್ಕ್.ಸಾರ್ವಜನಿಕ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮ ನಿರ್ದೇಶನ ಸದಸ್ಯರುಗಳಾದ ಮಂಜುನಾಥ್ ಎಚ್ ಅಗಡಿ. ಶಾಂತರಾಜ್ ಎಂ. ಹೆಚ್ ಮಂಜು ನಾಯ್ಕ್. ವೀರೇಶ್ ಆಚಾರ್ ಹೆಚ್. ಪ್ರವೀಣ್ ಜಿ ಪವರ್. ರೂಪ ವಿ ಕಾಟ್ವೆ. ಆಟೋ ರಾಜು. ಐರಣಿ ರಾಜು. ಸಾರ್ವಜನಿಕ ಆಸ್ಪತ್ರೆಯ ವೈದ್ಯರಗಳು ಆರೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿ ವರ್ಗ ತಾಯಿ ಮತ್ತು ಮಕ್ಕಳ ಆಸ್ಪತ್ರೆಕಟ್ಟಡ ಶಂಕುಸ್ಥಾಪನೆಯಲ್ಲಿ ಭಾಗವಹಿಸಿದ್ದರು