ತಾರಾನಾಥ ಆಸ್ಪತ್ರೆ ಹಿಂಭಾಗದಲ್ಲಿ ವಿಶ್ವ ಪರಿಸರ ದಿನ ಆಚರಣೆ

ಬಳ್ಳಾರಿ,ಜೂ.06: ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಅರಣ್ಯ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ ಅವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ನಗರದ ಅನಂತಪುರ ರಸ್ತೆಯ ತಾರಾನಾಥ ಆಸ್ಪತ್ರೆಯ ಹಿಂಭಾಗದಲ್ಲಿರುವ 30 ಎಂಎಲ್‍ಡಿ ಎಸ್‍ಟಿಪಿ ಬಳಿ ಗಿಡ ನೆಟ್ಟರು.
ಈ ಸಮಯದಲ್ಲಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ರಾಮಪ್ಪ ಚಳಕಾಪುರೆ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ, ಮಹಾನಗರ ಪಾಲಿಕೆ ಸಿಬ್ಬಂದಿ ಇದ್ದರು.