ತಾಲೂಕಾಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ


ಹುಬ್ಬಳ್ಳಿ, ಏ.14: ಇಂದು ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯತ ಸಭಾಭವನದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಹುಬ್ಬಳ್ಳಿ ಶಹರ ತಹಸೀಲ್ದಾರ ಕಲಗೌಡ ಪಾಟೀಲ, ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಮಂಜುಳಾ ಚವ್ಹಾಣ, ಅಪರ ತಹಸೀಲ್ದಾರರಾದ ಜಿ.ವಿ.ಪಾಟೀಲ, ಶಿವಾನಂದ ಹೆಬ್ಬಳ್ಳಿ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಕಂದಕೂರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸಿ.ಆರ್. ಅಂಬಿಗೇರ, ತಾಲೂಕಿನ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಡಾ. ಸಂಗಮೇಶ ಬಂಗಾರಿಮಠ, ಕಾರ್ಮಿಕ ಇಲಾಖೆಯ ಅಧಿಕಾರಿ ಅಶೋಕ ಒಡೆಯರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು ಭಾಗವಹಿಸಿದ್ದರು.