ತಾಲೂಕಾ ಆಡಳಿತದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ ಗೌರವ ನಮನ

ಸೇಡಂ, ಎ,14: ವಿಶ್ವರತ್ನ ದಲಿತ ಸೂರ್ಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 132ನೇ ಜಯಂತೋತ್ಸವ ಅಂಗವಾಗಿ ತಾಲೂಕ ಆಡಳಿತದಿಂದ ಪಟ್ಟಣದ ರೈಲ್ವೆ ನಿಲ್ದಾಣದ ಮುಂಭಾಗ ಇರುವ ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿದ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ಈ ವೇಳೆಯಲ್ಲಿ ಸಹಾಯಕ ಉಪವಿಭಾಗ ಆಯುಕ್ತರಾದ ಕಾರ್ತಿಕ ಎಮ್, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶಂಕರ್ ರಾಥೋಡ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ಸರ್ಕಾರ ನೌಕರರ ತಾಲೂಕು ಘಟಕ ಅಧ್ಯಕ್ಷ ಶಿವಶಂಕರಯ್ಯ ಸ್ವಾಮಿ ಇಮಡಾಪೂರ, ರಾಜಶೇಖರ್ ರುದನೂರು, ಮಾರುತಿ ನಾಯಕ್, ಸೇರದಂತೆ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.