ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾ ವರ್ಧಕ ಪ್ರೌಢ ಶಾಲೆ ಉತ್ತಮ ಸಾಧನೆ

ಸೈದಾಪುರ:ಸೆ.28:ಇಲ್ಲಿನ ಪ್ರತಿಷ್ಠಿತ ವಿದ್ಯಾ ವರ್ಧಕ ಪ್ರೌಢ ಶಾಲಾ ವಿದ್ಯಾರ್ಥಿಗಳು ಯಾದಗಿರಿಯಲ್ಲಿ ನಡೆದ ತಾಲೂಕಾ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ್ದಾರೆ.

ಗುಂಪು ಕ್ರೀಡೆಗಳಾದ ಬಾಲಕರ ಖೋ ಖೋದಲ್ಲಿ ಪ್ರಥಮ, ಬಾಲಕೀಯರ ಬಾಲ್ ಬ್ಯಾಡ್ಮಿಂಟನ್ ಪ್ರಥಮ ಸ್ಥಾನಗಳನ್ನು ಪಡೆದು ಜಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೂ ಬಾಲಕರ ಬಾಲ್ ಬ್ಯಾಡ್ಮಿಂಟನ್‍ದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಮುಖ್ಯಗುರು ಲಿಂಗಾರೆಡ್ಡಿ ನಾಯಕ, ದೈಹಿಕ ಶಿಕ್ಷಕ ವಿಶ್ವನಾಥರೆಡ್ಡಿ ಪಾಟೀಲ ಕಣೇಕಲ್, ಪ್ರಾಂಶುಪಾಲ ಹಂಪಣ್ಣ ಸಜ್ಜನ ಶೆಟ್ಟಿ, ಜಿ.ಎಂ.ಗುರುಪ್ರಸಾದ, ಕರಬಸಯ್ಯ ದಂಡಿಗಿಮಠ ಸೇರಿದಂತೆ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.


ಗುಂಪು ಪಂದ್ಯಗಳಲ್ಲಿ ನಮ್ಮ ಶಾಲೆಯ ಪ್ರೌಢ ಶಾಲಾ ಮಕ್ಕಳು ಉತ್ತಮ ಸಾಧನೆ ಮಾಡಿದ್ದಾರೆ. ಓದು ಎಷ್ಟು ಮುಖ್ಯವೋ ಕ್ರೀಡೆಯೂ ಅಷ್ಟೆ ಮುಖ್ಯವಾಗಿದೆ. ದೈಹಿಕ ಶಿಕ್ಷಕರ ಹಾಗೂ ಮಕ್ಕಳ ಪರಿಶ್ರಮಕ್ಕೆ ದೊರೆತ ಫಲವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡುವಂತಾಗಲಿ. ಇದಕ್ಕೆ ಬೇಕಾದ ಎಲ್ಲಾ ರೀತಿಯ ನೆರವು ನೀಡಲಾಗುವುದು.
               ಲಿಂಗಾರೆಡ್ಡಿ ನಾಯಕ ಮುಖ್ಯಗುರುಗಳು ವಿ.ವ.ಪ್ರೌ.ಶಾ.ಸೈದಾಪುರ