ತಾಲೂಕಾ ಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟ : ಉತ್ತಮ ಸಾಧನೆ

ಕಲಬುರಗಿ,ಸೆ.13:ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಕಾಲೇಜುಗಳ ಒಕ್ಕೂಟ ಇವುಗಳ ಜಂಟಿ ಆಶ್ರಯದಲ್ಲಿ ಜೇವರ್ಗಿ ತಾಲೂಕಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಜೇವರ್ಗಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದ್ವಿತೀಯ ಪಿಯು ಕಲಾ ವಿಭಾಗದ ವಿದ್ಯಾರ್ಥಿ ಮಹಾದೇವಪ್ಪ ಬಿ. ಮತ್ತು ಪ್ರಥಮ ಪಿಯು ಕಲಾ ವಿಭಾಗದ ಲಕ್ಷ್ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಆಯ್ಕೆಯಾಗಿದ್ದಾರೆ. ಇದಲ್ಲದೆ ಕಾಲೇಜಿನ ವಿದ್ಯಾರ್ಥಿಗಳಾದ ನಾಗರಾಜ ಎಂ., ಮಲ್ಲಿಕಾರ್ಜುನ ಎಂ., ಶಿವಾನಂದ ಬಿ., ಕರೀಮ್ ಎಂ., ಮಿಥುನ್ ಎನ್., ಅಯಾನ್ ಮುಬೀನ್ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಸಾಧನೆ ಮಾಡಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಪ್ರಾಚಾರ್ಯ ಮಹಮ್ಮದ್ ಅಲ್ಲ್ಲಾಉದ್ದೀನ್ ಸಾಗರ, ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ, ಉಪನ್ಯಾಸಕರಾದ ಚಂದ್ರಪ್ರಭ ಕಮಲಾಪೂರಕರ್, ರವೀಂದ್ರಕುಮಾರ ಬಟಗೇರಿ, ಶರಣಮ್ಮ ಭಾವಿಕಟ್ಟಿ, ನಯಿಮಾ ನಾಹಿದ್, ಶಂಕ್ರೆಪ್ಪ ಹೊಸದೊಡ್ಡಿ, ಪ್ರಕಾಶ ಪಾಟೀಲ, ರೇಣುಕಾ ಚಿಕ್ಕಮೇಟಿ, ರಂಜಿತಾ ಠಾಕೂರ್, ಪ್ರ.ದ.ಸ ನೇಸರ ಎಂ.ಬೀಳಗಿ ಹರ್ಷ ವ್ಯಕ್ತಪಡಿಸಿ, ಅಭಿನಂದಿಸಿದ್ದಾರೆ.