ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ

ಸಂಜೆವಾಣಿ ವಾರ್ತೆ

ಹರಪನಹಳ್ಳಿ.ಮಾ.೮: 2023-24ನೇ ಸಾಲಿನ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮ್ಯಾಕ್ರೋ ಯೋಜನೆಯಡಿ 23.38 ಕೋಟಿ ರೂ.ವೆಚ್ಚದಲ್ಲಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್  ಚಾಲನೆ ನೀಡಿದರು.ಪಟ್ಟಣದ ಗೋಸಾಯಿ ಗುಡ್ಡದಲ್ಲಿ ನಿರ್ಮಾಣಗೊಂಡಿರುವ ನೂತನ ನ್ಯಾಯಾಲಯ ಕಟ್ಟಡದವರೆಗೆ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಕ್ಷೇತ್ರಕ್ಕೆ ಕೆಕೆಆರ್‌ಡಿಬಿ ಯೋಜನೆಯಡಿ ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕೋಟಾದಡಿಯಲ್ಲಿ ಹೆಚ್ಚುವರಿಯಾಗಿ 23.38.41 ಲಕ್ಷ ರೂ.ಅನುದಾನ ಬಂದಿದ್ದು, ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಸಿಸಿ ರಸ್ತೆ, ಬಾಕ್ಸ್ ಚರಂಡಿ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು .ಚುನಾವಣೆ ಪೂರ್ವದಲ್ಲಿ ತಾಲೂಕಿನ ಜನರಿಗೆ ಭರವಸೆ ನೀಡಿದ್ದೆ ನನ್ನ ಚಿಹ್ನೆ ವ್ಯಾನಿಟಿ ಬ್ಯಾಗ್‌ಗೆ ಮತ ಹಾಕಿ ಗೆಲ್ಲಿಸಿ ವಿಧಾನಸೌಧಕ್ಕೆ ಕಳಿಸಿದರೆ ಆ ಬ್ಯಾಗಿನ ತುಂಬಾ ಅನುದಾನ ತಂದು ಕ್ಷೇತ್ರ ಅಭಿವೃದ್ಧಿ ಮಾಡುತ್ತೇನೆ ಎಂದು ಹೇಳಿದ್ದೇ ಅದರಂತೆ ಈಗಾಗಲೇ ಅಭಿವೃದ್ಧಿ ಪರ್ವ ಆರಂಭವಾಗಿದೆ ಇದು ನನ್ನ ಅವಧಿಯವರೆಗೂ ಮುಂದುವರೆಯಲಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ.ಅAಜಿನಪ್ಪ, ಪುರಸಭಾ ಸದಸ್ಯರಾದ ಟಿ.ವೆಂಕಟೇಶ, ಅಬ್ದುಲ್ ರೆಹಮಾನ್, ಲಾಟಿ ದಾದಾಪೀರ್, ಮುಖಂಡರಾದ ಹುಲಿಕಟ್ಟಿ ಚಂದ್ರಪ್ಪ, ರಿಯಾಜ್, ಗುಡಿ ನಾಗರಾಜ, ತಿಮ್ಮಾಲಾಪುರ ಈಶ್ವರ, ಜಾವೀದ್, ಮತ್ತೂರು ಬಸವರಾಜ, ಸಾಸ್ವಿಹಳ್ಳಿ ನಾಗರಾಜ, ಶಿವರಾಜ ನಿರ್ಮಿತಿ ಕೇಂದ್ರದ ಅಭಿಯಂತರ ಶಿವಕುಮಾರ ಸೇರಿದಂತೆ ಇತರರು ಇದ್ದರು.