ತಾಲೂಕು ಆಡಳಿತದ ವತಿಯಿಂದ ಅದ್ದೂರಿ ಶಿವಾಜಿ ಜಯಂತಿ ಆಚರಣೆ

ಔರಾದ : ಫೆ.20:ಪಟ್ಟಣದಲ್ಲಿ ತಾಲೂಕ ಆಡಳಿತ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಪಟ್ಟಣದ ಕನ್ನಡಾಂಬೆ ವೃತ್ರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಬಸ್ ನಿಲ್ದಾಣ, ಬಸವೇಶ್ವರ ವೃತ್ತ, ಮಾರ್ಗವಾಗಿ ತಹಸಿಲ್ ಕಚೇರಿ ವರೆಗೆ ಭವ್ಯ ಮೆರವಣಿಗೆ ನಡೆಯಿತು.

ತಾಲೂಕು ಆಡಳಿತದ ವತಿಯಿಂದ ವೇದಿಕೆ ಕಾರ್ಯಕ್ರಮ ಜರುಗಿತು. ತಹಶೀಲ್ದಾರ ನಾಗಯ್ಯ ಹಿರೇಮಠ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಸಮಾಜ ಮುಖಂಡ ಅನಿಲ ವಾಡೆಕರ್ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು ಛತ್ರಪತಿ ಶಿವಾಜಿ, ಭಾರತದ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಒಬ್ಬರು, ಅವರು ಮೊಘಲ್ ಚಕ್ರವರ್ತಿ ಔರಂಗಜೇಬನ ವಿರುದ್ಧ ನಿಂತು ಮರಾಠ ಸಾಮ್ರಾಜ್ಯವನ್ನು ಸ್ಥಾಪಿಸಿದರು. ಪ್ರತಿ ವರ್ಷ ಫೆ.19 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ.

ಶಿವಾಜಿ ಮಹಾರಾಜರು ಕೇವಲ ಮರಾಠಾ ಸಮುದಾಯಕ್ಕೆ ಸೀಮಿತವಾಗಿಲ್ಲ. ಅವರು ಸಾಮ್ರಾಜ್ಯದಲ್ಲಿ ಎಲ್ಲ ಸಮುದಾಯದವರನ್ನೂ ಸಮಾನತೆಯಿಂದ ಕಂಡಿದ್ದರು, ಶಿವಾಜಿ ಓರ್ವ ದಕ್ಷ ಆಡಳಿತಗಾರನಾಗಿದ್ದ್ದುದಲ್ಲದೆ, ಕ್ರಾಂತಿಕಾರಕ ಬದಲಾವಣೆಗಳ ಮೂಲಕ ವಿಶೇಷ ಆಡಳಿತ ವ್ಯವಸ್ಥೆಯನ್ನು ಜಾರಿಗೊಳಿಸಿದ್ದರು, ಅವರ ಆದರ್ಶಗಳು ಮುಂದಿನ ಪೀಳಿಗೆಗೆ ಪ್ರೇರಣೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕ ಪಂಚಾಯತ ಕಾರ್ಯ ನಿರ್ವಹಣಾಧಿಕಾರಿ ಬಿರೇಂದ್ರಸಿಂಗ ಠಾಕೂರ್, ಪಿಡಬ್ಲ್ಯೂಡಿ ಅಧಿಕಾರಿ ವೀರಶೆಟ್ಟಿ ರಾಥೋಡ್, ಪಿಆರ್ ಇ, ಎಇಇ.ವೆಂಕಟ ಸಿಂದೆ, ಮಾಣಿಕ ನಳಗೆ, ಬಿಜೆಪಿ ಯುವ ಮುಖಂಡ ಪ್ರತಿಕ ಚವ್ಹಾಣ, ಶಿವಾಜಿರಾವ ಪಾಟೀಲ ಮುಂಗನಾಳ, ಎಪಿಎಂಸಿ ಅಧ್ಯಕ್ಷ ಧೋಂಡಿಬಾ ನರೋಟೆ. ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.